Home News 2025-26ನೇ ಸಾಲಿನ KCET ಪರೀಕ್ಷೆ ಫಲಿತಾಂಶ ಪ್ರಕಟ

2025-26ನೇ ಸಾಲಿನ KCET ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಸಾಮಾನ್ಯ ಪ್ರವೇಶ ಪರೀಕ್ಷೆಯ (CET) ಫಲಿತಾಂಶ ಪ್ರಕಟಿಸಿದ್ದಾರೆ.
ಮಧ್ಯಾಹ್ನ 2 ಗಂಟೆ ನಂತರ ಇಲಾಖೆಯ ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಕೋರ್ಸ್​ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ.
ಕರ್ನಾಟಕ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು KEA ಯ ಅಧಿಕೃತ ಜಾಲತಾಣ kea.kar.nic.in ಅಥವಾ cetonline.karnataka.gov.in ನಲ್ಲಿ ತಮ್ಮ ಫಲಿತಾಂಶವನ್ನು ಮಧ್ಯಾಹ್ನ 2 ಗಂಟೆಯ ನಂತರ ಪರಿಶೀಲಿಸಬಹುದು.

Exit mobile version