2100 ಶಾಲಾ ಕೊಠಡಿ, 2500 ಅಂಗನವಾಡಿ ಕೇಂದ್ರ ಪ್ರಾರಂಭ

ಕಲಬುರಗಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಅಂಗವಾಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಸಿಎಂ ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಸಕ್ತ ವರ್ಷದಲ್ಲಿ 2,100 ಶಾಲಾ ಕೊಠಡಿ ನಿರ್ಮಾಣ ಹಾಗೂ 2500 ಅಂಗನವಾಡಿ ಕೇಂದ್ರ ತೆರೆಯಲು ಕ್ರಮ ವಹಿಸಲಾಗುವುದು. ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಿಸಲು ಆದೇಶಿಸಲಾಗಿದೆ. ಆರೋಗ್ಯ ಸೇವೆ ಉತ್ತಮಪಡಿಸಲು 68 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಲಾಗುತ್ತಿದೆ ಎಂದರು.