ಹುಬ್ಬಳ್ಳಿ: ರಾಣಿ ಚೆನ್ನಮ್ಮನ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಇದೇ ಅಕ್ಟೋಬರ್ 23ರಂದು ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮನವರು ಬ್ರಿಟಿಷರ ವಿರುದ್ಧ ಸಾರಿದ ಸಂಗ್ರಾಮದ ವಿಜಯಕ್ಕೆ 200 ವರ್ಷ ಸಂದಲಿದೆ. ಈ ಐತಿಹಾಸಿಕ ವಿಜಯದ ಜ್ಞಾಪಕಾರ್ಥವಾಗಿ ಇದೇ ಅಕ್ಟೋಬರ್ 23ಕ್ಕೆ ರಾಣಿ ಚೆನ್ನಮ್ಮನವರ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.