25 ಕ್ಷೇತ್ರ ಗೆಲ್ಲುವ ಗುರಿಯೊಂದಿಗೆ ಹೋರಾಡಿ

0
17

ದೆಹಲಿ: ಮುಂಬರುವ ಲೋಕಸಭಾ ಚುನಾವಣೆ ಸಿದ್ಧತೆ ದೃಷ್ಟಿಯಿಂದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ಕರ್ನಾಟಕ ಕಾಂಗ್ರೆಸ್ ನಾಯಕರ ಜತೆ ದೆಹಲಿಯಲ್ಲಿಂದು ಮೊದಲ ಹಂತದ ಸಭೆ ಬುಧವಾರ ನಡೆಸಿತು.
ಎಐಸಿಸಿ ಕಚೇರಿಯಲ್ಲಿ ಅಧ್ಯಕ್ಷ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಪಾರದರ್ಶಕ ಆಡಳಿತ ನೀಡಬೇಕು, ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಕಪ್ಪುಚುಕ್ಕೆ ಬಾರದಂತೆ ನೋಡಿಕೊಳ್ಳುವಂತೆ ಸಚಿವರಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ, 2024ರ ಲೋಕಸಭೆ ಚುನಾವಣೆ ಗೆಲ್ಲಲು ಸೂತ್ರ ರಚಿಸಲಾಗಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರ ಗೆಲ್ಲುವ ಗುರಿಯೊಂದಿಗೆ ಹೋರಾಡಬೇಕು ಎಂದು ಎಐಸಿಸಿ ನಾಯಕರು ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಜಿ. ಪರಮೇಶ್ವರ ಸೇರಿದಂತೆ ಹಿರಿಯ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದಾರೆ.

Previous articleಶಕ್ತಿ ಯೋಜನೆ ಫಲ: ಸಾರಿಗೆ ನೌಕರರಿಗೆ ಅರ್ಧ ಸಂಬಳ
Next articleಮೋದಿ ಸ್ಕೀಮ್ ಹೆಸರಿನಲ್ಲಿ ಸರ ಎಗರಿಸಿದ ಖದೀಮ