Home ತಾಜಾ ಸುದ್ದಿ 28ರಂದು ಹುಬ್ಬಳ್ಳಿಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್

28ರಂದು ಹುಬ್ಬಳ್ಳಿಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್

0

ಹುಬ್ಬಳ್ಳಿ: ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಫೆ. 28ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತಾದ ಪುಸ್ತಕವನ್ನು ಅವರು ಬಿಡುಗಡೆಗೊಳಿಸಲಿದ್ದಾರೆ. ಹುಬ್ಬಳ್ಳಿ ಬಿವಿಬಿ ಕಾಲೇಜು ಆವರಣದಲ್ಲಿ 28ರಂದು ಸಂಜೆ 4.30ಕ್ಕೆ ಪುಸ್ತಕ ಬಿಡುಗಡೆ ಸಮಾರಂಭ ಜರುಗಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಮತ್ತು ಸಂಸದ ಪ್ರಲ್ಹಾದ್‌ ಜೋಶಿ ಅವರ 16 ವರ್ಷದ ಅವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಸಂಪೂರ್ಣ ಮಾಹಿತಿಯನ್ನು ಪುಸ್ತಕ ಒಳಗೊಂಡಿದೆ.

Exit mobile version