28 ವಿವಿಗಳ ನಕಲಿ ಅಂಕಪಟ್ಟಿ ತಯಾರಿಕಾ ಜಾಲ: ಕಿಂಗ್​​ಪಿನ್ ಬಂಧನ

0
41

ಕಲಬುರಗಿ: ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ ಕಿಂಗ್ ಪಿನ್‌ನನ್ನು ಕಲಬುರಗಿಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ದೇಹಲಿ ಮೂಲದ ರಾಜೀವ ಸಿಂಗ್ ಆರೋರಾ ಎಂದು ಗುರುತಿಸಲಾಗಿದ್ದು, ಕಲಬುರಗಿ ಪೊಲೀಸರು ದೆಹಲಿಯ ರಾಮಪಾರ್ಕ್ ಅಪಾರ್ಟ್ಮೆಂಟ್ ದ್ವಾರಕ್ ಮೋಡ್​ನಲ್ಲಿ ಬಂಧಿಸಿದ್ದಾರೆ. ರಾಜೀವ ಸಿಂಗ್ ಆರೋರಾ ನಕಲಿ ಅಂಕಪಟ್ಟಿ ಜೊತೆಗೆ ನಕಲಿ ವಿಶ್ವವಿದ್ಯಾಲಯ ಸೃಷ್ಟಿ ಮಾಡಿ ಅದರ ಹೆಸರಲ್ಲಿ ನಕಲಿ ಅಂಕಪಟ್ಟಿ ಮಾರಾಟ ಮಾಡುತ್ತಿದ್ದ. ಕರ್ನಾಟಕದ ಬೆಂಗಳೂರು, ಮೈಸೂರು, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಹೆಸರಲ್ಲಿ ನಕಲಿ ಅಂಕಪಟ್ಟಿ ತಯಾರಿ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ನಕಲಿ ವಿಶ್ವವಿದ್ಯಾಲಯ ಸೃಷ್ಟಿ ಮಾಡಿ ಅದರ ಹೆಸರಲ್ಲಿ ನಕಲಿ ಅಂಕಪಟ್ಟಿ ಮಾರಾಟ ಮಾಡುತ್ತಿದ್ದ. ಕರ್ನಾಟಕದ ಬೆಂಗಳೂರು, ಮೈಸೂರು, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಹೆಸರಲ್ಲಿ ನಕಲಿ ಅಂಕಪಟ್ಟಿ ತಯಾರಿ ಮಾಡುತ್ತಿದ್ದ. ಕಳೆದ ಏಳೆಂಟು ವರ್ಷಗಳಿಂದ ಬಂಧಿತ ಆರೋಪಿ ರಾಜೀವ ಸಿಂಗ್ ಆರೋರಾ ನಕಲಿ ಅಂಕ ಪಟ್ಟಿ ತಯಾರಿ ಮಾಡುತ್ತಿದ್ದನು. ಬರೋಬ್ಬರಿ 522 ನಕಲಿ ಅಂಕಪಟ್ಟಿಗಳು, 1626 ಖಾಲಿ ಅಂಕಪಟ್ಟಿಗಳು, 36 ಮೊಬೈಲ್, 2 ಲ್ಯಾಪ್ ಟಾಪ್, 1 ಪ್ರಿಂಟರ್, ವಿವಿಧ ವಿಶ್ವವಿದ್ಯಾಲಯಗಳ 122 ನಕಲಿ ಸೀಲ್‌ಗಳು, ಎಟಿಎಂ ಕಾರ್ಡ್ ಮತ್ತು ಆರೋಪಿಯ 123 ನಕಲಿ ಐಡಿಗಳು, ಆರೋಪಿಯ 35 ಬ್ಯಾಂಕ್‌ ಅಕೌಂಟ್‌ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Previous articleಆ್ಯಕ್ಸೆಲ್ ಕಟ್ಟಾಗಿ ಪಲ್ಟಿ ಹೊಡೆದ ಬಸ್: ಪ್ರಯಾಣಿಕರು ಕಿಮ್ಸ್‌ಗೆ ದಾಖಲು
Next articleಸಿದ್ಧಾರೂಢರ ಅದ್ಧೂರಿ ರಥೋತ್ಸವ…