Home ತಾಜಾ ಸುದ್ದಿ 3ರಂದು ಬೆಳಗಾವಿಯಲ್ಲಿ ಲಿಂಗಾಯತರ ಮಹತ್ವದ ಸಭೆ

3ರಂದು ಬೆಳಗಾವಿಯಲ್ಲಿ ಲಿಂಗಾಯತರ ಮಹತ್ವದ ಸಭೆ

0

ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಜಾತಿವಾರು ಲೆಕ್ಕಾಚಾರವಿಟ್ಟುಕೊಂಡು ಚರ್ಚೆಗಳು ಜೋರಾಗಿ ನಡೆದಿವೆ. ಅದರಲ್ಲೂ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಲಿಂಗಾಯತರಿಗೆ ಟಿಕೆಟ್ ನೀಡಬೇಕು ಎನ್ನುವ ಕೂಗು ಈಗ ಮತ್ತಷ್ಟು ಜೋರಾಗಿದೆ. ಈ ಹಿನ್ನೆಲೆಯಲ್ಲಿ ನಾಳೆ ದಿ. 3ರಂದು ಬೆಳಿಗ್ಗೆ 11ಕ್ಕೆ ಇಲ್ಲಿನ ನಾಗನೂರು ಮಠದಲ್ಲಿ ಲಿಂಗಾಯತ ಸಂಘಟನೆಗಳ ಪ್ರಮುಖರ ಸಭೆ ನಡೆಯಲಿದೆ.
ನಾಗನೂರು ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಸಭೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ನಡೆದಿರುವ ಪ್ರಸಕ್ತ ರಾಜಕೀಯ ಸನ್ನಿವೇಶಗಳ ಬಗ್ಗೆಯೇ ಚರ್ಚೆ ನಡೆಯಲಿದೆ ಎನ್ನುವ ಮಾಹಿತಿ ಪತ್ರಿಕೆಗೆ ಸಿಕ್ಕಿದೆ. ಗಮನಿಸಬೇಕಾದ ಸಂಗತಿ ಎಂದರೆ, ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಲಿಂಗಾಯತರಿಗೆ ಟಿಕೆಟ್ ನೀಡಬೇಕು ಎನ್ನುವ ಕೂಗು ಕೇಳಿ ಬರುತ್ತಿದೆ.

Exit mobile version