3ನೇ ಟೆಸ್ಟ್‌ಗೆ ಕೊಹ್ಲಿ ಡೌಟ್‌?

0
14

ಮುಂಬೈ: ಭಾರತ ಕ್ರಿಕೆಟ್‌ ತಂಡದ ಬ್ಯಾಟರ್ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂಗ್ಲೆಂಡ್ ವಿರುದ್ಧದ ಭಾರತದ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಬದಲಿಗೆ ಬಲಗೈ ಬ್ಯಾಟರ್ ರಜತ್ ಪಾಟಿದಾರ್ ಅವರನ್ನು ಕಣಕ್ಕಿಳಿಸಲಾಗಿತ್ತು.
ಬಿಸಿಸಿಐ ಆಯ್ಕೆದಾರರಿಗೆ ಕೊಹ್ಲಿ 3ನೇ ಟೆಸ್ಟ್‌ ಪಂದ್ಯದಲ್ಲಿ ಆಡುವ ಬಗ್ಗೆ ಇನ್ನೂ ತಿಳಿದು ಬಂದಿಲ್ಲ ಎನ್ನಲಾಗಿದೆ. ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಕೊಹ್ಲಿ ಹಿಂದೆ ಸರಿದಿದ್ದಾರೆ, ಈ ಸಮಯದಲ್ಲಿ ಕೊಹ್ಲಿಯ ಖಾಸಗಿತನವನ್ನು ಗೌರವಿಸುವಂತೆ ಮಾಧ್ಯಮಗಳು ಮತ್ತು ಅಭಿಮಾನಿಗಳಿಗೆ ಬಿಸಿಸಿಐ ವಿನಂತಿಸಿತ್ತು.

Previous articleದೇಶ ವಿಭಜಿಸುವುದೇ ಕಾಂಗ್ರೆಸ್‌ ಸಂಸ್ಕೃತಿ
Next articleಜಾಗೃತಿಗಾಗಿ ಡ್ರಾಮಾ ಮಾಡಿದ ಪೂನಂ