3 ಡಿಸಿಎಂ ಹೈಕಮಾಂಡ್‌ಗೆ ಬಿಟ್ಟ ವಿಚಾರ

0
8

ಕುಷ್ಟಗಿ: ಕಾಂಗ್ರೆಸ್ ಹೆಚ್ಚುವರಿ ಡಿಸಿಎಂ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು ಮೂರು ಡಿಸಿಎಂ ನೀಡುವಂತೆ ಪಕ್ಷದ ಮುಖಂಡರಿಗೆ ಕೇಳಿರುವುದಿಲ್ಲ. ಡಿಸಿಎಂ ಮಾಡುವ ವಿಚಾರವನ್ನು ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದೆ. ಈ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳುವ ಅವಶ್ಯಕತೆ ಇದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಕುಷ್ಟಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನಾ ಸಮುದಾಯಗಳ ನಿರೀಕ್ಷೆಯಂತೆ ಪ್ರಾತಿನಿಧ್ಯ ನೀಡುವುದರಿಂದ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ. ಈ ದೃಷ್ಟಿಯಿಂದ ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ಸೂಕ್ತ ಎಂದು ಹೇಳಿದ್ದಾರೆ. ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ಸಂಬಂಧ ಈ ಮುನ್ನ ಹಲವು ಹಿರಿಯ ಸಚಿವರು ಪ್ರಸ್ತಾಪಿಸಿದ್ದರು. ಇದು ಪಕ್ಷ ಮತ್ತು ಸರ್ಕಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ ಎಂದರು.
ಕಾಂಗ್ರೆಸ್ಸಿನಲ್ಲಿ ಯಾವುದೇ ಭಿನ್ನಮತ ಸೃಷ್ಟಿಯಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಪ್ರತಿಯೊಬ್ಬರೂ ಸಮನ್ವಯದಿಂದ ಕೆಲಸ ಮಾಡುತಿದ್ದೇವೆ. ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ತಿಳಿಸಿದರು.

Previous articleಜನವರಿ ಕೊನೆಯ ವಾರದಲ್ಲಿ ಉದ್ಯೋಗ ಮೇಳ: ಸಿದ್ಧತೆಗೆ ಸಚಿವರ ತಂಡ ರಚನೆ
Next articleರಾಯರಡ್ಡಿ ಸಮಾಧಾನ ಪಡಿಸಿದ ಸಿಎಂ ಸಿದ್ದು