ರಾಜ್ಕೋಟ್: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದಾರೆ.
ಮೂರನೇ ದಿನದಾಟ ಶುರು ಮಾಡಿದ ಇಂಗ್ಲೆಂಡ್ ತಂಡವನ್ನು ಕಟ್ಟಿ ಹಾಕುವಲ್ಲಿ ಟೀಮ್ ಇಂಡಿಯಾ ಬೌಲರ್ಗಳು ಯಶಸ್ವಿಯಾಗಿದ್ದಾರೆ. ಮೊಹಮ್ಮದ್ ಸಿರಾಜ್ 21.1 ಓವರ್ಗಳಲ್ಲಿ 84 ರನ್ ನೀಡಿ 4 ವಿಕೆಟ್ ಕಬಳಿಸಿದರು. ಈ ಮೂಲಕ ಇಂಗ್ಲೆಂಡ್ ತಂಡ 319 ರನ್ಗಳಿಗೆ ಆಲೌಟ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದರು, ನಾಲ್ಕು ವಿಕೆಟ್ ಕಿತ್ತು ಮಿಂಚಿದ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅವರು ವಿಶೇಷ ಮೈಲುಗಲ್ಲೊಂದನ್ನು ತಲುಪಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 150 ವಿಕೆಟ್ಗಳನ್ನು ಪೂರೈಸಿದ್ದಾರೆ. ಈ ಸಾಧನೆ ಮಾಡಿದ ಭಾರತದ 33ನೇ ಬೌಲರ್ ಎನಿಸಿಕೊಂಡಿದ್ದಾರೆ.