ಅದ್ಧೂರಿಯಾಗಿ ಜೋಶಿ ಮೆರವಣಿಗೆ ಪ್ರಾರಂಭ

0
17

ಧಾರವಾಡ: ಲೋಕಸಭೆ ಚುನಾವಣೆ ಬಿಜೆಪಿ ಅಭ್ಯರ್ಥಿಯಾಗಿ ಪ್ರಹ್ಲಾದ್‌ ಜೋಶಿ ಇಂದು ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನಾಮಪತ್ರ ಸಲ್ಲಿಕೆ ಹಿನ್ನಲೆಯಲ್ಲಿ ಜನಸಾಗರದ ಮೆರವಣಿಗೆ ಆರಂಬಗೊಂಡಿದೆ, -ಕೇಸರಿ ಧ್ವಜಗಳ ಹಾರಾಟ, ಮೋದಿ, ಯಡಿಯೂರಪ್ಪ ಜೋಶಿ ಭಾವಚಿತ್ರಗಳ ಮೆರಗು, ಹೆಗಲ ಮೇಲೆ ಕೇಸರಿ ವಸ್ತ್ರಗಳು, ರಸ್ತೆಯುದ್ದಕ್ಕೂ ಪುಷ್ಪವೃಷ್ಟಿ, ವಿವಿಧ ವಾದ್ಯ ಮೇಳಗಳ ಮೆರಗು, ಜೆಡಿಎಸ್ ಘಟಕದಿಂದ ಬೆಂಬಲ

ಪ್ರಹ್ಲಾದ ಜೋಶಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಂಸದ ವಿಜಯ ಸಂಕ್ಷೇಶ್ವರ, ಮಾಜಿ ಸಚಿವರಾದ ಹಾಲಪ್ಪ ಆಚಾರ, ಸಿ.ಸಿ.ಪಾಟೀಲ, ಭೈರತಿ ಬಸವರಾಜ, ಶಾಸಕ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಪ್ರದೀಪ ಶೆಟ್ಟರ್, ಎಸ.ವಿ.ಸಂಕನೂರ, ಮಾಜಿ ಶಾಸಕರಾದ ಸೀಮಾ ಮಸೂತಿ, ಅಮೃತ ದೇಸಾಯಿ, ನಾಗರಾಜ ಛಬ್ಬಿ, ಜೆಡಿಎಸ್ ಜಿಲ್ಲಾಧ್ಯಕ್ಷ ಗುರುರಾಜ ಹುಣಸೀಮರದ ಸಾಥ್ ನೀಡಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ದೇವಸ್ಥಾನಗಳಿಗೆ ಭೇಟಿ ನೀಡಿ ದರ್ಶನ, ಆಶೀರ್ವಾದ ಪಡೆದಿದ್ದಾರೆ.

ಭವಾನಿ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು

ಶ್ರೀ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ಧಾರೂಢ ಸ್ವಾಮಿಯವರ ಆಶೀರ್ವಾದ ಪಡೆದರು

ಮೂರುಸಾವಿರ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಪರಮಪೂಜ್ಯ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮಿಗಳ ಆಶೀರ್ವಾದ ಪಡೆದರು

ಹುಬ್ಬಳ್ಳಿಯ ನಾಗಶೆಟ್ಟಿಕೊಪ್ಪ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು

ಧಾರವಾಡದ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು

ಧಾರವಾಡದ ಮುರುಘಾ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಮುರುಘಾಮಠದ ಡಾ.ಮಲ್ಲಿಕಾರ್ಜುನ ಸ್ವಾಮೀಜಿಗಳ ಆಶೀರ್ವಾದ ಪಡೆದರು

Previous articleಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ನಾಮಪತ್ರ ಸಲ್ಲಿಕೆ
Next articleಬೆಳಗಾವಿ: ಮೃಣಾಲ್ ಹೆಬ್ಬಾಳಕರ ನಾಮಪತ್ರ ಸಲ್ಲಿಕೆ