Home ತಾಜಾ ಸುದ್ದಿ 40 ಪರ್ಸೆಂಟ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿಲ್ಲ

40 ಪರ್ಸೆಂಟ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿಲ್ಲ

0

ಬೆಂಗಳೂರು: 40 ಪರ್ಸೆಂಟ್ ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ ಎನ್ನುವುದು ಸುಳ್ಳು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ‌ ಪಕ್ಷ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತೇವೆ ಎಂದು ಜನರಿಗೆ ಮನೆಮನೆಗೆ ಹೋಗಿ ಭರವಸೆ ಕೊಟ್ಟಿದ್ದೆವು. ಅಂದಿನ ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಭ್ರಷ್ಟಾಚಾರ ಜಾಸ್ತಿಯಾಗಿದೆ. ಕಾಮಗಾರಿಗಳಲ್ಲಿ ಹಣ ತೆಗೆದುಕೊಳ್ಳುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದ ಆಧಾರದ ಮೇಲೆ ನಾವು 40 ಪರ್ಸೆಂಟ್ ಆರೋಪ ಮಾಡಿದ್ದೇವೆ. ಆದರೆ ಕೇವಲ 40 ಪರ್ಸೆಂಟ್ ಆರೋಪದಿಂದ ನಾವು ಅಧಿಕಾರಕ್ಕೆ ಬಂದಿದ್ದೇವೆ ಎನ್ನುವುದು ಸುಳ್ಳು ಎಂದರು.
ವಕ್ಫ್ ವಿಷಯವನ್ನು ಬಿಜೆಪಿಯವರು ರಾಜಕೀಯ ಅಸ್ತ್ರವಾಗಿ ಬಳಕೆ ಮಾಡುತ್ತಿದ್ದಾರೆ. ಕೋಮುಗಲಭೆ, ಶಾಂತಿ ಹಾಳು ಮಾಡಲು ಅವರು ಏನಾದರು ಮಾಡಬಹುದು. ಅದಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಮುಂದಕ್ಕೆ ಯಾವ ರೀತಿ ತೆಗೆದುಕೊಳ್ಳುತ್ತದೆ ಎಂದು ಈಗ ಊಹೆ ಮಾಡಲು ಆಗುವುದಿಲ್ಲ ಎಂದರು.

Exit mobile version