Home Advertisement
Home ನಮ್ಮ ಜಿಲ್ಲೆ 40% ಕಮಿಷನ್ ಆರೋಪವನ್ನು ದಾಖಲೆಸಹಿತ ತೋರಿಸಲಿ

40% ಕಮಿಷನ್ ಆರೋಪವನ್ನು ದಾಖಲೆಸಹಿತ ತೋರಿಸಲಿ

0
101
BASAVARAJ BOMAI

ಬೆಂಗಳೂರು: ಬಿಜೆಪಿ ಸರ್ಕಾರದ ಮೇಲಿನ 40% ಕಮಿಷನ್ ಆರೋಪವನ್ನು ಕಾಂಗ್ರೆಸ್ ಸರ್ಕಾರ ದಾಖಲೆಸಹಿತ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸವಾಲ್ ಹಾಕಿದರು. ಇಂದು‌ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದ ಅವರು ಬಿಜೆಪಿ ಅವಧಿಯ ಹಗರಣಗಳ ತನಿಖೆ ಮಾಡುತ್ತೇವೆ ಎಂದಿರುವ ಕಾಂಗ್ರೆಸ್‌ಗೆ, ನಾನು ಸ್ಪಷ್ಟವಾಗಿ ಹೇಳುತ್ತಿದ್ದೇ‌ನೆ. ದಯವಿಟ್ಟು ಎಲ್ಲ ತನಿಖೆ ಮಾಡಲಿ. 40% ಕಮೀಷನ್ ಆರೋಪವನ್ನು ನಮ್ಮ ಮೇಲೆ ಅವರು ಹೊರೆಸಿದ್ದಾರೆ. 40% ಆಗಿದೆ ಅಂತ ಅವರು ಪುರಾವೆ ಸಮೇತ ತೋರಿಸಬೇಕು. ಕಾಂಗ್ರೆಸ್ ಸರ್ಕಾರ 40% ಆರೋಪ ಕುರಿತ ಎಲ್ಲ ದಾಖಲೆ ಕೊಡಲಿ. ನಾವು 40% ಕಮೀಷನ್ ತೆಗೆದುಕೊಂಡಿದ್ದೇವೆ ಎಂಬುದನ್ನು ದಾಖಲೆಸಹಿತ ತೋರಿಸಲಿ. ಈ ಸಂಬಂಧ ನಾನು ಕೂಡ ಆಗ್ರಹ ಮಾಡುತ್ತೇನೆ ಎಂದರು.
ಗುತ್ತಿಗೆದಾರರ ಸಂಘದವರೂ 40% ಕಮೀಷನ್ ಆರೋಪ ಮಾಡಿದ್ದರು. ಈಗ ಅವರ ಸರ್ಕಾರ ಬಂದಿದೆ. 40% ಇಲ್ಲ ಅಂತ ಹೇಳಬಹುದು. ಗುತ್ತಿಗೆದಾರ ಸಂಘದವರು ಇನ್ನು ಮುಂದಿನ ಎಲ್ಲ ಟೆಂಡರ್‌ಗಳಲ್ಲೂ 40% ಕಡಿಮೆ ಹಾಕಲಿ. ಅಂದರೆ ಮಾತ್ರ ನಮ್ಮ ಕಾಲದಲ್ಲಿ 40% ಇತ್ತು ಅಂತ ಆಗುತ್ತದೆ. ಇವತ್ತು ಅಷ್ಟೇ ಮೊತ್ತಕ್ಕೆ ಟೆಂಡರ್ ಹಾಕಿದರೆ, 40% ಈಗಲೂ ಇದೆ ಅಂತ ಆಗುತ್ತದೆ ಎಂದರು.
ಗುತ್ತಿಗೆದಾರರು ಸಂಘದ ಅಧ್ಯಕ್ಷ ಕೆಂಪಣ್ಣ ಮೇಲೆ ಬಹಳ ದೊಡ್ಡ ಜವಾಬ್ದಾರಿ ಇದೆ ಇನ್ಮೇಲೆ ಕೆಂಪಣ್ಣ ತಮ್ಮೆಲ್ಲ ಸಂಘದವರಿಗೂ 40% ಕಮ್ಮಿಗೆ ಟೆಂಡರ್ ಹಾಕುವಂತೆ ಹೇಳಬೇಕು. ಕೆಂಪಣ್ಣ ಇದುವರೆಗೆ 40% ದಾಖಲೆ ಕೊಡ್ಲಿಲ್ಲ, ಕೋರ್ಟ್‌ಗೂ ಕೊಡ್ಲಿಲ್ಲ. ನಮ್ಮ ವಿರುದ್ಧ ಅಪಪ್ರಚಾರ ಮಾಡಿದರು. ಕಾಂಗ್ರೆಸ್‌ನವರು ಅದರ ಲಾಭ ತೆಗೆದುಕೊಂಡಿದ್ದಾರೆ. ನಮ್ಮ ಕಾಲದ, ಅವರ ಕಾಲದ ಎಲ್ಲವನ್ನೂ ತನಿಖೆ ಮಾಡಲಿ. ಅದರ ಜೊತೆಗೆ ಪಿಎಸ್ಐ ಪ್ರಕರಣವನ್ನೂ ತನಿಖೆ ಮಾಡಲಿ. ಎಲ್ಲ ಪ್ರಕರಣಗಳ ಸತ್ಯ ಹೊರಗೆ ಬರಲಿ. ನಾವು ಅವರ ಕಾಲದ ಹಗರಣಗಳನ್ನು ಲೋಕಾಯುಕ್ತಕ್ಕೆ ಕೊಟ್ಟಿದೀವಿ ಎಂದರು.
ಗ್ಯಾರಂಟಿ ಬಗ್ಗೆ ಜನರಿಗೆ ಕಾಂಗ್ರೆಸ್ ಮೋಸ ಮಾಡಿದೆ: ಗ್ಯಾರಂಟಿ ಸ್ಕೀಂ ಬಗ್ಗೆಯೂ ಬಹಳ ಜನ ಹೇಳಿದ್ದಾರೆ. ಗ್ಯಾರಂಟಿ ಬಗ್ಗೆ ಜನರಿಗೆ ಕಾಂಗ್ರೆಸ್ ಮೋಸ ಮಾಡಿದೆ. ಕಾರ್ಯಕರ್ತರು ಜನರ ಬಳಿ ಹೋಗಿ ಹೇಳಿಲ್ಲ. ಅದರ ಬಗ್ಗೆ ಯಾವುದೋ ಬ್ಯಾಂಕ್ ನಿಂದ, ಕಂಪೆನಿಯಿಂದ ಬಂದವರ ರೀತಿ ಹೋಗಿ ಗ್ಯಾರಂಟಿ ಸ್ಕೀಂ ಬಗ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಡಿಸಿ ಆಫೀಸ್ ನಿಂದ ಅಂತ ಕರೆ ಮಾಡಿ ಸುಳ್ಳು ಹೇಳಿದ್ದಾರೆ. ಯಾವ ಡಿಸಿ ಆಫೀಸ್ ಅಂದರೆ, ಡಿಸ್ಟ್ರಿಕ್ಟ್ ಕಾಂಗ್ರೆಸ್ ಆಫೀಸ್ ಅಂತ ಹೇಳಿದ್ದಾರೆ. ಈ ತರಹ ಮೋಸ ಮಾಡಿ ಗ್ಯಾರಂಟಿ ಸ್ಕೀಂ ಬಗ್ಗೆ ಹೇಳಿದ್ದಾರೆ. ಎಲ್ಲವೂ ಮುಂದೆ ಬೆಳಕಿಗೆ ಬರಲಿದೆ ಎಂದರು.