Home ಸುದ್ದಿ ರಾಜ್ಯ 5, 8ನೇ ತರಗತಿ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ ಪ್ರಕಟ

5, 8ನೇ ತರಗತಿ ಮೌಲ್ಯಾಂಕನ ಪರೀಕ್ಷೆ ವೇಳಾಪಟ್ಟಿ ಪ್ರಕಟ

0

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಮಾರ್ಚ್ 2023ನೇ ಸಾಲಿನ 5 ಮತ್ತು 8ನೇ ತರಗತಿಯ ಮೌಲ್ಯಂಕನ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಇನ್ನೂ 5 ಮತ್ತು 8ನೇ ತರಗತಿಯ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ವೇಳಾಪಟ್ಟಿಯ ಪ್ರಕಾರ ಮಾರ್ಚ್ ಎರಡನೇ ವಾರದಂದು ಪರೀಕ್ಷೆ ನಡೆಸಲು ನಿರ್ಧರಿದೆ, ಅಂದರೆ ದಿನಾಂಕ 13-03-2023 ರಿಂದ 18-03-2023ರ ವರೆಗೆ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ. ಇನ್ನೂ ಮೌಲ್ಯಂಕನ ಪರೀಕ್ಷೆಗೂ ಮೊದಲು ದಿನಾಂಕ 06-03-2023 ರಿಂದ 10-03-2023ರ ವರೆಗೆ ವಿದ್ಯಾರ್ಥಿಗಳಿಗೆ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಸೂಚಿಸಿದೆ.

Exit mobile version