ಬೆಂಗಳೂರು : ರಾಜ್ಯ ಪಠ್ಯ ಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ಮಕ್ಕಳ ಬೋರ್ಡ್ ಪರೀಕ್ಷೆಯ ಇರುವುದಿಲ್ಲ ಎಂದು ಶಿಕ್ಷಣ ಇಲಾಖೆ ಸೂಚಿಸಿದೆ.
ಬೋರ್ಡ್ ಪರೀಕ್ಷೆಯ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವುದರಿಂದ 2024-25ನೇ ಸಾಲಿನಲ್ಲಿ ಈ ಹಿಂದೆ ಇದ್ದಂತೆ ಎಲ್ಲ ತರಗತಿಗಳಿಗೂ ಮೌಲ್ಯಾಂಕನ ಮುಂದುವರೆಸಲು ಇಲಾಖೆ ಸೂಚಿಸಿದೆ. 2024-25ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ರಾಜ್ಯ ಪಠ್ಯ ಕ್ರಮದ 1ರಿಂದ 10ನೇ ತರಗತಿ ಶಾಲೆಗಳಿಗೆ 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕ್ರಿಯಾಯೋಜನೆ ಹಾಗೂ ಶೈಕ್ಷಣಿಕ ಮಾರ್ಗದರ್ಶಿಯನ್ನು ಹೊರಡಿಸಲಾಗಿದೆ. ಇದನ್ನು ಆಧರಿಸಿ ಶಾಲೆಗಳಲ್ಲಿ ಪಠ್ಯ ವಸ್ತು ಬೋಧನೆ ಹಾಗೂ ಮೌಲ್ಯಾಂಕನ ಕುರಿತು ವಹಿಸಬೇಕಾದ ಕ್ರಮಗಳನ್ನು ಸೂಚಿಸಿ, ಅದರಂತೆ ಕ್ರಮವಹಿಸಲು ತಿಳಿಸಿದೆ.