Home ತಾಜಾ ಸುದ್ದಿ 5, 8, 9 ಹಾಗೂ 11ನೇ ತರಗತಿ ಪಬ್ಲಿಕ್ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ತಡೆ

5, 8, 9 ಹಾಗೂ 11ನೇ ತರಗತಿ ಪಬ್ಲಿಕ್ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ತಡೆ

0

ನವದೆಹಲಿ: ರಾಜ್ಯದ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆಯ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂಕೋರ್ಟ್ ತಡೆ ನೀಡಿದ್ದು, ಮುಂದಿನ ಆದೇಶದವರೆಗೂ ಕಾಯಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.
5,8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆಗೆ ಅನುಮತಿ ನೀಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ರುಪ್ಸಾ, ಅವರ್ ಸ್ಕೂಲ್, ಆರ್‌ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘಟನೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದವು. ಸೋಮವಾರ ಮೌಲ್ಯಾಂಕನ ಪರೀಕ್ಷೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮುಂದಿನ ಆದೇಶದವರೆಗೆ ಫಲಿತಾಂಶವನ್ನು ಪ್ರಕಟಿಸಬಾರದೆಂದು ಆದೇಶಿಸಿ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಅಲ್ಲದೇ ರಾಜ್ಯ ಸರ್ಕಾರಕ್ಕೆ ನೋಟಿಸ್ ಕೂಡ ಜಾರಿಗೊಳಿಸಿದೆ.

Exit mobile version