Home Advertisement
Home ತಾಜಾ ಸುದ್ದಿ 5, 8,9 ಮತ್ತು 11 ನೇ ತರಗತಿ ಬೋರ್ಡ್ ಎಕ್ಸಾಂ ರದ್ದು

5, 8,9 ಮತ್ತು 11 ನೇ ತರಗತಿ ಬೋರ್ಡ್ ಎಕ್ಸಾಂ ರದ್ದು

0
223
exam

ಬೆಂಗಳೂರು: ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿರುವ 5,8,9 ಮತ್ತು 11ನೇ ತರಗತಿಗಳ ಪಬ್ಲಿಕ್‌ ಪರೀಕ್ಷೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.
ಬಿಜೆಪಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಬಿ ಸಿ ನಾಗೇಶ್ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಮಾದರಿಯ ಮೌಲ್ಯಾಂಕನ ಪರೀಕ್ಷೆ ಜಾರಿಗೆ ತಂದಿದ್ದರು. ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್‌ ಎಕ್ಸಾಮ್‌ ನಡೆಸುವ ಚಿಂತನೆ ಮಾಡಲಾಗಿತ್ತು. 9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಪಬ್ಲಿಕ್‌ ಪರೀಕ್ಷೆ ನಡೆಸುವುದರಿಂದ ವಿದ್ಯಾರ್ಥಿಗಳ ಕಲಿಕೆಯಲ್ಲಿ ಗಂಭೀರತೆ ಕಾಣಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ಅವರ ವಾದವಾಗಿತ್ತು. ಇದೀಗ ಹೈಕೋರ್ಟ್‌ ಪರೀಕ್ಷೆ ಸುತ್ತೋಲೆಯನ್ನು ರದ್ದು ಮಾಡಿರುವುದರಿಂದ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆಯಾಗಿದೆ. ತಕ್ಷಣಕ್ಕೆ ಮೇಲ್ಮನವಿ ಸಲ್ಲಿಸಿ ಪರೀಕ್ಷೆ ನಡೆಸುವ ಸಾಧ್ಯತೆ ಕಡಿಮೆ ಇರುವುದರಿಂದ ಈ ವರ್ಷದ ಮಟ್ಟಿಗೆ ಪಬ್ಲಿಕ್‌ ಪರೀಕ್ಷೆ ಇರಲಿಕ್ಕಿಲ್ಲ ಎನ್ನಲಾಗುತ್ತಿದೆ. ಡಿಸೆಂಬರ್ 2023ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು. ವಾದ ಆಲಿಸಿದ ಹೈಕೋರ್ಟ್ ಸರ್ಕಾರ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿದೆ.