ಹುಬ್ಬಳ್ಳಿ: 500 ರೂಪಾಯಿಗಾಗಿ ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಶನಿವಾರ ರಾತ್ರಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆನಂದ ನಗರದಲ್ಲಿ ನಡೆದಿದೆ.
ಮೊಹ್ಮದ್ ಎಂಬ ಯುವಕ ಚಾಕು ಇರಿತಕ್ಕೇ ಒಳಗಾಗಿದ್ದು, ಆತನ ಸ್ನೇಹಿತರೇ ಚಾಕು ಇರಿದಿದ್ದಾರೆ ಎನ್ನಲಾಗಿದೆ. ಶನಿವಾರ ರಾತ್ರಿ ಗೆಳೆಯರೆಲ್ಲರೂ ಒಟ್ಟಿಗೆ ಸೇರಿದಾಗ 500 ರೂಪಾಯಿ ಸಲುವಾಗಿ ಜಗಳ ಆರಂಭವಾಗಿದ್ದು, ಜಗಳ ವಿಕೋಪಕ್ಕೆ ಹೋಗುತ್ತಿದ್ದ ಹಾಗೆ ಮೊಹ್ಮದ್ ಚಾಕುವಿನಿಂದ ಇರಿದಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಡಿಸಿಪಿ ಮಹಾನಿಂಗ ನಂದಗಾವಿ, ಎಸಿಪಿ ಚಿಕ್ಕಮಠ ಹಾಗೂ ಹಳೇ ಹುಬ್ಬಳ್ಳಿ ಠಾಣೆಯ ಇನ್ಸಪೆಕ್ಟರ್ ಸುರೇಶ ಯಳ್ಳುರ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಅಲ್ತಾಫ್, ಜಾಫರ್, ರಫೀಕ್, ರಿಜ್ಜು ಸೇರಿ ಚಾಕುವಿನಿಂದ ಇರಿದಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮೊಹ್ಮದ್ ನನ್ನು ಸ್ಥಳೀಯರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.