ಚಿಕ್ಕಮಗಳೂರು: ರಾಜ್ಯ ಸರ್ಕಾರ ಸಕ್ರೀಯ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರುವ ನಿಟ್ಟಿನಲ್ಲಿ 2024ರ ನಕ್ಸಲ್ ಪ್ಯಾಕೇಜ್ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೆ ಆರು ಜನ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಪ್ರಕ್ರಿಯೆ ನಡೆಯುತ್ತಿದೆ.
ನಕ್ಸಲರಾದ ಮುಂಡಗಾರು ಲತಾ, ಸುಂದರಿ ಕುಲ್ಲೂರು, ವನಜಾಕ್ಷಿ ಬಾಳೆಹೊಳೆ, ಮಾರೆಪ್ಪ ಅರೋಲಿ, ಕೆ. ವಸಂತ, ಟಿ.ಎನ್. ಜೀಶ್ ಮುಖ್ಯವಾಹಿನಿಗೆ ಬರಲಿದ್ದಾರೆಂದು ಹೇಳಲಾಗುತ್ತಿದೆ. ನಕ್ಸಲ್ ಶರಣಾಗತಿ ಸಮಿತಿ ಸಭೆಗಳು ನಡೆದಿದ್ದು ಒಂದೆರೆಡು ದಿನಗಳಲ್ಲಿ ನಕ್ಸಲರು ಸಮಾಜದ ಮುಖ್ಯವಾಹಿನಿಗೆ ಬರುವ ಪ್ರಕ್ರಿಯೇ ಅಂತಿಮಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.