SK Home Ad
Home ಸುದ್ದಿ ಬಸವ ಮಂಟಪ; ವಿದೇಶಕ್ಕೆ ಪರಾರಿಯಾಗುವ ಮುನ್ನ ಲೇಖಕ ರವಿ ಹಂಜ ಅರೆಸ್ಟ್‌

ಬಸವ ಮಂಟಪ; ವಿದೇಶಕ್ಕೆ ಪರಾರಿಯಾಗುವ ಮುನ್ನ ಲೇಖಕ ರವಿ ಹಂಜ ಅರೆಸ್ಟ್‌

0
11

ಬಸವ ಮಂಟಪ’ ಕೃತಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ಲೇಖಕ ರವಿಹಂಜ್ ಅವರನ್ನು ಕೇರಳದ ಕೊಚ್ಚಿನ್ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಶನಿವಾರ ವಶಕ್ಕೆ ಪಡೆದಿದ್ದಾರೆ.

ವಿಶ್ವಗುರು ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಬಿಂಬಿಸಿರುವ ತಮ್ಮ ‘ಬಸವ ಮಂಟಪ’ ಕೃತಿ ಹಾಗೂ ತಮ್ಮ ಹೇಳಿಕೆ ವಿರುದ್ಧ ಜನಾಕ್ರೋಶ ತೀವ್ರ ಸ್ವರೂಪಕ್ಕೆ ತಿರುಗಿದ ಬೆನ್ನಲ್ಲೇ ರವಿ ಹಂಜ್‌ ಅವರಿಗೆ ಬಂಧಿಸಲಾಗಿದೆ.

ರವಿ ಹಂಜ್ ಅವರು ವಿದೇಶಕ್ಕೆ ಪ್ರಯಾಣ ಬೆಳೆಸಲು ಮುಂದಾದಾಗ, ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಅವರನ್ನು ತಡೆದು, ವಶಕ್ಕೆ ಪಡೆದುಕೊಂಡಿದ್ದಾರೆ ಎಂಬುದು ತಿಳಿದುಬಂದಿದೆ. ಬಸವ ಮಂಟಪ ಕೃತಿಯ ಕುರಿತಾದ ವಿವಾದದ ಹಿನ್ನೆಲೆಯಲ್ಲಿ, ರವಿ ಹಂಜ್ ಅವರ ವಿರುದ್ಧ ಈಗಾಗಲೇ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿತ್ತು.

ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಅವರು ಭಾರತದಲ್ಲೇ ಇದ್ದಾರೆ ಎಂದು ಸ್ಪಷ್ಟಪಡಿಸಲಾಗಿತ್ತು. ಬೆಳಗಾವಿಯಲ್ಲಿ ಈ ವಿವಾದಕ್ಕೆ ಸಂಬಂಧಿಸಿದಂತೆ ಒಂದು ಪ್ರಕರಣ ದಾಖಲಾಗಿತ್ತು. ಬೆಳಗಾವಿ ಪೊಲೀಸರು ಸಹ ರವಿ ಹಂಜ್ ವಿರುದ್ಧ ಲುಕ್ ಔಟ್ ನೋಟಿಸ್ ಹೊರಡಿಸಿದ್ದರು.

ಕೊಚ್ಚಿನ್ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ, ರವಿ ಹಂಜ್ ಅವರನ್ನು ವಶಕ್ಕೆ ಪಡೆದ ನಂತರ, ಈ ಕುರಿತು ಬೆಳಗಾವಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮುಂದಿನ ಕ್ರಮಗಳನ್ನು ಬೆಳಗಾವಿ ಪೊಲೀಸರು ಕೈಗೊಳ್ಳಲಿದ್ದಾರೆ. ಬಸವ ಮಂಟಪ ಕೃತಿಯ ವಿಷಯದಲ್ಲಿ ನಡೆದ ಬೆಳವಣಿಗೆಗಳು ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿವೆ.