BBMP ಮುಖ್ಯ ಆಯುಕ್ತರಾಗಿ ಮಹೇಶ್ವರ ರಾವ್ ನೇಮಕ

ಬೆಂಗಳೂರು: ಬೆಂಗಳೂರಿನ ಪಾಲಿಕೆ ಮುಖ್ಯ ಆಯುಕ್ತರ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
BBMP ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ ಅವರನ್ನು ಬದಲಾವಣೆ ಮಾಡಲಾಗಿದ್ದು. ಹೊಸ ಬಿಬಿಎಂಪಿ ಮುಖ್ಯ ಆಯುಕ್ತರನ್ನಾಗಿ ಮಹೇಶ್ವರ ರಾವ್ ಅವರನ್ನು ನೇಮಕ ಮಾಡಲಾಗಿದೆ. ಮಹೇಶ್ವರ್‌ ರಾವ್‌ ಅವರು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ. ಅವರಿಗೆ ಹೆಚ್ಚುವರಿ ಜವಾಬ್ದಾರಿಯನ್ನು ಕೊಡಲಾಗಿದೆ. ಇನ್ನು ಬಿಬಿಎಂಪಿ ಮುಖ್ಯ ಆಯುಕ್ತರೊಂದಿಗೆ ಬಿಬಿಎಂಪಿ ಆಡಳಿತಾಧಿಕಾರಿಯೂ ಬದಲಾವಣೆಯಾದಂತಾಗಿದೆ. ಬಿಬಿಎಂಪಿಯ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ಅವರು ಕಳೆದ ಎರಡೂವರೆ ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ.