BJP ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾಗೇಂದ್ರನ್ ನಾಮಪತ್ರ

ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಚುನಾವಣೆಗೆ ತಿರುನಲ್ವೇಲಿ ಕ್ಷೇತ್ರದ ಬಿಜೆಪಿ ಶಾಸಕ ನೈನಾ‌ರ್ ನಾಗೇಂದ್ರನ್ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.

ಎಐಡಿಎಂಕೆ ಸರ್ಕಾರದ ಸಚಿವರಾಗಿದ್ದ ನಾಗೇಂದ್ರನ್, 2017 ರಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದರು. ಪ್ರಸ್ತುತ ತಿರುನಲ್ವೇಲಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.
ಭಾರತೀಯ ಜನತಾ ಪಕ್ಷದ ತಮಿಳುನಾಡಿನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ತಿರುನಲ್ವೇಲಿ ಕ್ಷೇತ್ರದ ಬಿಜೆಪಿ ಶಾಸಕ ನೈನಾ‌ರ್ ನಾಗೇಂದ್ರನ್ ನಾಮಪತ್ರ ಸಲ್ಲಿಸಿದ್ದಾರೆ. ಈ ಪರಿಸ್ಥಿತಿಯಲ್ಲಿ, ತಮಿಳುನಾಡು ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ನೈನಾರ್ ನಾಗೇಂದ್ರನ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಈ ಸಂಬಂಧ ನಾಳೆ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದ್ದು, ತಮಿಳುನಾಡು ಬಿಜೆಪಿಯ 13 ನೇ ಅಧ್ಯಕ್ಷರಾಗಿ ನೈನಾರ್ ನಾಗೇರ್ನಂದ್ರನ್ ಆಯ್ಕೆಯಾಗಲಿದ್ದಾರೆ. ನೈನಾರ್ ನಾಗೇಂದ್ರ ಅವರ ವಿರುದ್ಧ ಯಾರೂ ಸ್ಪರ್ಧಿಸದ ಕಾರಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು ಅಧಿಕೃತ ಘೋಷಣೆ ಒಂದೇ ಬಾಕಿ ಇದೆ