BMTC, KUWSDB, KKRTC ತಾತ್ಕಾಲಿಕ ಅಂಕ ಪಟ್ಟಿ ಪ್ರಕಟ

0
30

BMTC, KUWSDB, KKRTC ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಜುಲೈ 13 & 14 ರಂದು ನಡೆಸಲಾದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ತಾತ್ಕಾಲಿಕ ಅಂಕ ಪಟ್ಟಿಯನ್ನು #KEA Website ನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಆ.8ರ ಸಂಜೆ 5.30ರೊಳಗೆ ಸಲ್ಲಿಸಬಹುದು.

ಬೆಂಗಳೂರು: BMTC, KUWSDB & KKRTC ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ 13.07.2024 ಮತ್ತು 14.07.2024 ರಂದು BMTC (ನಿರ್ವಾಹಕರು-ಕಲ್ಯಾಣ ಕರ್ನಾಟಕ), KUWSDB (ಪ್ರಥಮ ದರ್ಜೆ ಲೆಕ್ಕ ಸಹಾಯಕರು) & KKRTC ಸಂಸ್ಥೆಗಳಲ್ಲಿನ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿರುತ್ತದೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ದಿನಾಂಕ 16.07.2024 ರಂದು ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿ ದಿನಾಂಕ 18.07.2024 ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು, ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಸಮಿತಿಯ ಶಿಫಾರಸ್ಸಿನಂತೆ ಪರಿಷ್ಕೃತ ಕೀ ಉತ್ತರಗಳನ್ನು ದಿನಾಂಕ 24.07.2024 ರಂದು ಪ್ರಕಟಿಸಲಾಗಿರುತ್ತದೆ. ಅದರಂತೆ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ತಾತ್ಕಾಲಿಕ ಅಂಕ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 03.08.2024 ಸಂಜೆ 5.30 ರೊಳಗೆ ನಿಗದಿತ ಲಿಂಕ್ ಮೂಲಕ ಪೂರಕ ದಾಖಲೆಗಳೊಂದಿಗೆ ಸಲ್ಲಿಸತಕ್ಕದ್ದು. ಪೂರಕ ದಾಖಲೆಗಳಿಲ್ಲದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿದೆ.

Previous articleನಕಲಿ ಆಭರಣಗಳ ಅಸಲಿಯತ್ತ ಪತ್ತೆ ಹಚ್ಚಿದ ಪೊಲೀಸ್‌ರು
Next articleಗದಗ ರಾಬರಿ ಪ್ರಕರಣ: ಎಸ್ಕೆಪ್‌ಗೆ ಯತ್ನಸಿದ ರೌಡಿಶೀಟರ್‌ಗೆ ಗುಂಡೇಟು