Home ತಾಜಾ ಸುದ್ದಿ BPL CARD: ಬಡವರ ಪಡಿತರ ಚೀಟಿ ರದ್ದಾದರೆ ಅಧಿಕಾರಿಗಳ ವಿರುದ್ಧ ಕ್ರಮ

BPL CARD: ಬಡವರ ಪಡಿತರ ಚೀಟಿ ರದ್ದಾದರೆ ಅಧಿಕಾರಿಗಳ ವಿರುದ್ಧ ಕ್ರಮ

0

ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಅಧಿಕಾರಿಗಳ ವಿರುದ್ಧ ಕ್ರಮ ಜರಗಿಸುವುದಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡಬಾರದು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡಬೇಕು. ಬಡ ಕುಟುಂಬದವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

Exit mobile version