ದುಬೈ: ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಚಾಂಪಿಯನ್ಸ್ ಟ್ರೋಫಿಯ 2ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಿದ್ದು. ಬಾಂಗ್ಲಾದೇಶ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಏಕದಿನ ಕ್ರಿಕೆಟ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಒಟ್ಟು 41 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 32 ಬಾರಿ ಜಯ ಸಾಧಿಸಿದರೆ, ಬಾಂಗ್ಲಾದೇಶ್ 8 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಮ್ಯಾಚ್ ಕಾರಣಾಂತರಗಳಿಂದ ರದ್ದಾಗಿತ್ತು.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಸರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್.
ಬಾಂಗ್ಲಾ ತಂಡ: ತಂಝಿದ್ ಹಸನ್, ಸೌಮ್ಯ ಸರ್ಕಾರ್, ನಜ್ಮುಲ್ ಹೊಸೈನ್ ಶಾಂಟೋ (ನಾಯಕ), ತೌಹಿದ್ ಹೃದಯೋಯ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ಜೇಕರ್ ಅಲಿ, ರಿಶಾದ್ ಹೊಸೈನ್, ತಂಝಿಮ್ ಹಸನ್ ಸಾಕಿಬ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರಹಮಾನ್.