Home ಕ್ರೀಡೆ Champions Trophy : ಟಾಸ್ ಗೆದ್ದು ಬ್ಯಾಟ್‌ ಹಿಡಿದ ಬಾಂಗ್ಲಾದೇಶ

Champions Trophy : ಟಾಸ್ ಗೆದ್ದು ಬ್ಯಾಟ್‌ ಹಿಡಿದ ಬಾಂಗ್ಲಾದೇಶ

0

ದುಬೈ: ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಚಾಂಪಿಯನ್ಸ್ ಟ್ರೋಫಿಯ 2ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಿದ್ದು. ಬಾಂಗ್ಲಾದೇಶ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಏಕದಿನ ಕ್ರಿಕೆಟ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಒಟ್ಟು 41 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 32 ಬಾರಿ ಜಯ ಸಾಧಿಸಿದರೆ, ಬಾಂಗ್ಲಾದೇಶ್ 8 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಮ್ಯಾಚ್ ಕಾರಣಾಂತರಗಳಿಂದ ರದ್ದಾಗಿತ್ತು.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಸರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್.

ಬಾಂಗ್ಲಾ ತಂಡ: ತಂಝಿದ್ ಹಸನ್, ಸೌಮ್ಯ ಸರ್ಕಾರ್, ನಜ್ಮುಲ್ ಹೊಸೈನ್ ಶಾಂಟೋ (ನಾಯಕ), ತೌಹಿದ್ ಹೃದಯೋಯ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮೆಹಿದಿ ಹಸನ್ ಮಿರಾಜ್, ಜೇಕರ್ ಅಲಿ, ರಿಶಾದ್ ಹೊಸೈನ್, ತಂಝಿಮ್ ಹಸನ್ ಸಾಕಿಬ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರಹಮಾನ್.

Exit mobile version