ಚಿಕ್ಕಮಗಳೂರು: ರೈತರು ಹಾಗೂ ಪರಿಸರವಾದಿಗಳ ವಿರೋಧದ ನಡುವೆಯೂ 38 ಕಾಡಾನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ಕಾರ್ಯಾಚರಣೆ ಮುಂದುವರಿದಿದೆ. ಹಾಸನ ಭಾಗದಿಂದ ಚಿಕ್ಕಮಗಳೂರು ಜಿಲ್ಲೆಯತ್ತ ಕಾಡಾನೆಗಳ ಸ್ಥಳಾಂತರ ಕಾರ್ಯಾಚರಣೆ ಯಶಸ್ವಿಯಾಗಿ ನಡೆದಿದೆ.
ಕಾಡಾನೆಗಳ ಹಾವಳಿಯಿಂದ ತೊಂದರೆ ಅನುಭವಿಸುತ್ತಿರುವ ಪ್ರದೇಶಗಳಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಅರಣ್ಯ ಇಲಾಖೆ ಈ ಕಾರ್ಯಾಚರಣೆ ಕೈಗೊಂಡಿದೆ. ಐದನೇ ದಿನವೂ ಕಾರ್ಯಾಚರಣೆ ಮುಂದುವರಿದಿದ್ದು, ಕಾಡಾನೆಗಳನ್ನು ಸುರಕ್ಷಿತವಾಗಿ ಭದ್ರಾ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸುವ ಪ್ರಕ್ರಿಯೆ ನಡೆದಿದೆ.
ಆದರೆ, ಈ ಸ್ಥಳಾಂತರ ಕಾರ್ಯಾಚರಣೆಗೆ ಇಂದು ರಾತ್ರಿ ಒಳಗಾಗಿ ಆನೆಗಳನ್ನು ವಾಪಸ ಕಳುಹಿಸದಿದ್ದರೆ ತಮ್ಮ ಅಧಿಕಾರ ತ್ಯಾಗಕ್ಕೆ ಸಿದ್ಧ ಎಂದು ಜಿಲ್ಲೆಯ ಶಾಸಕರಗಳಾದ ನಯನಾ ಮೋಟಮ್ಮ, ಟಿ.ಡಿ. ರಾಜೇಗೌಡ, ಎಚ್.ಡಿ. ತಿಮ್ಮಯ್ಯ ಖಂಡಿಸಿದ್ದಾರೆ. ಕಾಡಾನೆಗಳ ಸ್ಥಳಾಂತರದಿಂದ ಉಂಟಾಗಬಹುದಾದ ಪರಿಣಾಮಗಳ ಕುರಿತು ಆತಂಕ ವ್ಯಕ್ತಪಡಿಸಿರುವ ಸ್ಥಳೀಯರು, ಕಾರ್ಯಾಚರಣೆಯ ಬಗ್ಗೆ ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ, ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆಯನ್ನು ಮುಂದುವರಿಸಿದ್ದು, 38 ಆನೆಗಳ ಸ್ಥಳಾಂತರ ಪ್ರಕ್ರಿಯೆ ಗಮನ ಸೆಳೆದಿದೆ.




















