DRDO ವಿಜ್ಞಾನಿಗಳ ಬಗ್ಗೆ ಹೆಮ್ಮೆ ಇದೆ ಎಂದ ಪ್ರಧಾನಿ

0
23

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ವಿಜ್ಞಾನಿಗಳು ಮಿಷನ್ ದಿವ್ಯಾಸ್ತ್ರವನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಿದ ಸಾಧನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ,ಮಾಡಿರುವ ಅವರು ದೇಶೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಹಾರಾಟದ ಪರೀಕ್ಷೆಯನ್ನು DRDO ವಿಜ್ಞಾನಿಗಳು ಪ್ರದರ್ಶಿಸಿದ ತಾಂತ್ರಿಕ ಸಾಮರ್ಥ್ಯದ ಬಗ್ಗೆ ಪ್ರಧಾನಿ ಮೋದಿ ಹೆಮ್ಮೆ ವ್ಯಕ್ತಪಡಿಸಿದರು. MIRV ತಂತ್ರಜ್ಞಾನದೊಂದಿಗೆ ಅಗ್ನಿ-5 ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಹಾರಾಟವು ದೇಶದ ರಕ್ಷಣಾ ಸನ್ನದ್ಧತೆ ಮತ್ತು ಕಾರ್ಯತಂತ್ರದ ಸಾಮರ್ಥ್ಯಗಳನ್ನು ಹೆಚ್ಚಿಸುವಲ್ಲಿ ಮಹತ್ವದ ಮೈಲಿಗಲ್ಲನ್ನು ಸೂಚಿಸುತ್ತದೆ.

Previous articleಶ್ರೀರಂಗ ಕ್ರಿಕೆಟ್ ಕಪ್” ನಂಜನಗೂಡು ಮಡಿಲಿಗೆ
Next articleಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆ