ಬೆಂಗಳೂರು: ವಿದ್ಯುತ್ ಚಾಲಿತ ವಾಹನದ ಲೀಥಿಯಂ ಸೆಲ್‌ಗಳಿಗೆ ಹೆಸರಾಗಿರುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಅಧ್ಯಕ್ಷರು ಹಾಗೂ ಪ್ರತಿನಿಧಿಗಳೊಂದಿಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮಾತುಕತೆ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಷಯ ಹಂಚಿಕೊಂಡ ಅವರು ವಿದ್ಯುತ್ ಚಾಲಿತ ವಾಹನಗಳ ಅಗತ್ಯಕ್ಕೆ ತಕ್ಕಂತೆ ಲೀಥಿಯಂ ಸೆಲ್‌ಗಳ ಉತ್ಪಾದನೆ ನಡೆಯುತ್ತಿಲ್ಲ. ಈ ಕೊರತೆ ನೀಗಿಸಲು ಐಬಿಸಿ ಕಂಪನಿ ರಾಜ್ಯದಲ್ಲಿ ಸುಮಾರು ರೂ. 8,000 ಕೋಟಿ ಹೂಡಿಕೆಯೊಂದಿಗೆ ಲೀಥಿಯಂ ಸೆಲ್ ಬ್ಯಾಟರಿಗಳ ಉತ್ಪಾದನಾ ಘಟಕ ಸ್ಥಾಪಿಸಲು ಮುಂದೆ ಬಂದಿದೆ. ರಾಜ್ಯವು EV ಉದ್ಯಮ ಮತ್ತು ಉದ್ಯೋಗ ಸೃಷ್ಟಿಯಲ್ಲಿ ಗಮನಾರ್ಹ ಬೆಳವಣಿಗೆ ಸಾಧಿಸುವ ಅವಕಾಶಗಳನ್ನು ಉತ್ತೇಜಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಐಬಿಸಿ ಕಂಪನಿಯು ರಾಜ್ಯದಲ್ಲೇ ನೆಲೆಯೂರುವಂತೆ ನೋಡಿಕೊಳ್ಳಲು ಅಗತ್ಯವಿರುವ ನೆರವು ನೀಡಲಾಗುವುದು. ಜತೆಗೆ ನಮ್ಮ ಕೈಗಾರಿಕಾ ನೀತಿಯ ಪ್ರಕಾರ ಸಾಧ್ಯವಿರುವ ಪ್ರೋತ್ಸಾಹ/ಉತ್ತೇಜನ ಒದಗಿಸಲಾಗುವುದು ಎಂದಿದ್ದಾರೆ.