IND vs AUS 3rd Test: ಭಾರತದ ಗೆಲುವಿಗೆ 275 ರನ್‌ ಗುರಿ

0
28

ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್‌ ಪಂದ್ಯದ 5ನೇ ದಿನದಾಟದಲ್ಲಿ ಆಸ್ಟ್ರೇಲಿಯಾ ಎರಡನೇ ಇನಿಂಗ್ಸ್‌ನಲ್ಲಿ 7 ವಿಕೆಟ್‌ಗೆ 89 ರನ್‌ಗಳಿಗೆ ಡಿಕ್ಲೇರ್ ಮಾಡಿಕೊಂಡಿದೆ. ಈ ಮೂಲಕ ಭಾರತಕ್ಕೆ ಈ ಪಂದ್ಯವನ್ನು ಗೆಲ್ಲಲು 275 ರನ್‌ಗಳ ಗುರಿಯನ್ನು ನೀಡಿದೆ.
ಬ್ರಿಸ್ಬೇನ್​ನ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ 445 ರನ್​ ಕಲೆಹಾಕಿದರೆ, ಟೀಮ್ ಇಂಡಿಯಾ 260 ರನ್​ಗಳಿಸಿ ಆಲೌಟ್ ಆಗಿತ್ತು. ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ತಂಡವು 18 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 89 ರನ್ ಕಲೆಹಾಕಿ ಡಿಕ್ಲೇರ್ ಘೋಷಿಸಿದೆ.

Previous articleಹುಬ್ಬಳ್ಳಿ-ಧಾರವಾಡದಲ್ಲಿ ಲೈಟ್ ಟ್ರಾಮ್ ಸಾರಿಗೆ ಯೋಜನೆ ತರುವತ್ತ ಸಚಿವ ಸಂತೋಷ್ ಲಾಡ್ ಚಿತ್ತ
Next articleಕೇಂದ್ರದಲ್ಲೂ ಬಿಜೆಪಿ ಸರ್ಕಾರ ಇದ್ದರೂ ತಮ್ಮ ಪ್ರಾಮಿಸ್ ಉಳಿಸಿಕೊಳ್ಳಲಿಲ್ಲ…