Home Advertisement
Home ಸುದ್ದಿ ದೇಶ ಯಾರಿಗೆ ಪಟ್ಟ? ಯಾರಿಗೆ ಕಷ್ಟ? ಚುನಾವಣೋತ್ತರ ಸಮೀಕ್ಷೆಯಲ್ಲಿ ಬಹಿರಂಗ

ಯಾರಿಗೆ ಪಟ್ಟ? ಯಾರಿಗೆ ಕಷ್ಟ? ಚುನಾವಣೋತ್ತರ ಸಮೀಕ್ಷೆಯಲ್ಲಿ ಬಹಿರಂಗ

0
215

ನವದೆಹಲಿ: ದೇಶದ ಐದು ರಾಜ್ಯಗಳ ವಿಧಾನಸಭೆಗೆ ಮತದಾನ ಮುಕ್ತಾಯಗೊಂಡಿದ್ದು, ಯಾವ ರಾಜ್ಯದಲ್ಲಿ ಯಾವ ಪಕ್ಷ ಅಧಿಕಾರವನ್ನು ವಹಿಸಲಿದೆ ಎನ್ನುವುದು ಸದ್ಯಕ್ಕೆ ಕುತೂಹಲ ಕೆರಳಿಸಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಎಕ್ಸಿಟ್‌ ಪೋಲ್‌ ಫಲಿತಾಂಶ ಹೊರಬರಲಿದೆ.

ದೇಶದಲ್ಲಿ ಸದ್ಯ ಪಂಚರಾಜ್ಯಗಳ ಚುನಾವಣೆ ಪ್ರಕ್ರಿಯೆ ನಡೆದಿದ್ದು, ಕೇರಳ, ಅಸ್ಸಾಂ, ಪುದುಚೇರಿ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ ಮುಕ್ತಾಯಗೊಂಡಿದೆ.

ಪಶ್ಚಿಮ ಬಂಗಾಳದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆದಿದ್ದು, ಏಪ್ರಿಲ್‌ 23ರಂದು ಮೊದಲ ಹಂತ, ಏಪ್ರಿಲ್‌ 29ರಂದು ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಇಂದು (ಬುಧವಾರ) ಸಂಜೆಯ ಸುಮಾರಿಗೆ ಪೂರ್ಣಗೊಳ್ಳಲಿದೆ.

ಇದೇ ಅವಧಿಯಲ್ಲಿ ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗಳು ಸಹ ನಡೆದಿವೆ. ಅದರಲ್ಲಿ ಕರ್ನಾಟಕದ 2 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು, ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭೆ ಕ್ಷೇತ್ರಗಳಲ್ಲಿ ಮತದಾನ ಪೂರ್ಣಗೊಂಡಿದೆ.

ಇನ್ನು ದೇಶದ ಇತರೆ ರಾಜ್ಯಗಳಾದ ಗೋವಾ, ಗುಜರಾತ್, ಮಹಾರಾಷ್ಟ್ರ, ನಾಗಾಲ್ಯಾಂಡ್ ಮತ್ತು ತ್ರಿಪುರದಲ್ಲಿಯೂ ಉಪ ಚುನಾವಣೆ ನಡೆದಿದ್ದು, ಎಲ್ಲ ಚುನಾವಣೆಯ ಫಲಿತಾಂಶ ಮೇ 4 ರಂದು ಪ್ರಕಟವಾಗಲಿದೆ.