SK Home Ad
Home ಸುದ್ದಿ ದೇಶ ಗೋವಾದಲ್ಲಿ 57ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ

ಗೋವಾದಲ್ಲಿ 57ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಚಾಲನೆ

0
31

ಪಣಜಿ: ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವು ಗೋವಾದ ಸಾಂಸ್ಕೃತಿಕ ಕ್ಯಾಲೆಂಡರ್‌ನ ಅವಿಭಾಜ್ಯ ಅಂಗವಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದರು.

ಗೋವಾದ ಬಾಂಬೋಲಿಂ ಬಳಿಯ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ 57ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (ಇಫಿ) ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಾವಂತ್, ಈ ಉತ್ಸವವು ವಿಶ್ವದ ವಿವಿಧ ಭಾಗಗಳ ಚಲನಚಿತ್ರ ನಿರ್ಮಾಪಕರು ಮತ್ತು ಪ್ರೇಕ್ಷಕರನ್ನು ಒಂದೆಡೆ ಸೇರಿಸುತ್ತದೆ. ಅಂತಾರಾಷ್ಟ್ರೀಯ ಸಿನಿಮಾ ಭೂಪಟದಲ್ಲಿ ಗೋವಾಕ್ಕೆ ಹೆಮ್ಮೆಯ ಸ್ಥಾನ ಕಲ್ಪಿಸಿದೆ. ಕಳೆದ 22 ವರ್ಷಗಳಿಂದ ಗೋವಾದಲ್ಲಿ ಚಲನಚಿತ್ರೋತ್ಸವ ಆಯೋಜಿಸಲಾಗುತ್ತಿದ್ದು, ಗೋವಾ ಇದರ ಖಾಯಂ ಆತಿಥೇಯ ಸ್ಥಳವಾಗಿದೆ. ಈ ಬಾರಿ 84 ದೇಶಗಳ 154 ಚಿತ್ರಗಳು ಹಾಗೂ 75 ಭಾರತೀಯ ಚಿತ್ರಗಳು ಪ್ರದರ್ಶನಗೊಳ್ಳಲಿವೆ ಎಂದರು.

ನಟ ಹಾಗೂ ಸಂಸದ ರವಿಕಿಶನ್, ರಾಜ್ಯಸಭಾ ಸದಸ್ಯ ಸದಾನಂದ ತಾನಾವಡೆ, ಚಂಚಲಕುಮಾರ್ ಮತ್ತು ಆಶುತೋಷ್ ಗೋವಾರೀಕರ್ ದೀಪ ಬೆಳಗಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು.

ಉದ್ಘಾಟನಾ ಸಮಾರಂಭದಲ್ಲಿ ಭಾರತೀಯ ಸಿನಿಮಾದ ಬೆಳವಣಿಗೆ ಮತ್ತು ವೈವಿಧ್ಯತೆಯನ್ನು ಬಿಂಬಿಸುವ ನೃತ್ಯ, ಸಂಗೀತ ಕಾರ್ಯಕ್ರಮಗಳು ಗಮನ ಸೆಳೆದವು. ಗೋವಾದ ಸ್ಥಳೀಯ ಜಾನಪದ ಕಲೆಗಳ ಪ್ರದರ್ಶನವೂ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು. ವಿವಿಧ ದೇಶಗಳ ಅತ್ಯುತ್ತಮ ಚಿತ್ರಗಳು ಉತ್ಸವದಲ್ಲಿ ಪ್ರದರ್ಶನಗೊಳ್ಳಲಿದ್ದು, ಪ್ರತಿಷ್ಠಿತ ʻಸುವರ್ಣ ಮಯೂರʼ ಪ್ರಶಸ್ತಿಗಾಗಿ ಸ್ಪರ್ಧೆ ನಡೆಯಲಿದೆ. ಭಾರತೀಯ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ಹಿರಿಯ ಕಲಾವಿದರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.