SK Home Ad
Home ಸುದ್ದಿ ದೇಶ ಅಪಹರಣ–ಅತ್ಯಾಚಾರ–ಕೊಲೆ: ಆರೋಪಿ ಎನ್‌ಕೌಂಟರ್‌ಗೆ ಬಲಿ

ಅಪಹರಣ–ಅತ್ಯಾಚಾರ–ಕೊಲೆ: ಆರೋಪಿ ಎನ್‌ಕೌಂಟರ್‌ಗೆ ಬಲಿ

0
68

ಅಹಮದಾಬಾದ್‌: ಗುಜರಾತ್‌ನ ಆನಂದ್ ಜಿಲ್ಲೆಯಲ್ಲಿ ನಾಲ್ಕು ವರ್ಷದ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುರೇಶ್ ಪರ್ಮಾರ್‌ (25) ಪೊಲೀಸ್ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದಾನೆ.

ಸೋಮವಾರ ಬೋರ್ಸಾದ್‌ನಲ್ಲಿ ಬಂಧಿತನಾಗಿದ್ದ ಆರೋಪಿಯನ್ನು ಆನಂದ್ ನಗರಕ್ಕೆ ಪೊಲೀಸರು ಕರೆತರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮಾರ್ಗಮಧ್ಯೆ ಅನಾರೋಗ್ಯದ ನೆಪ ಹೇಳಿ ವಾಹನ ನಿಲ್ಲಿಸುವಂತೆ ಆರೋಪಿ ಮನವಿ ಮಾಡಿದ್ದಾನೆ. ವಾಹನದಿಂದ ಇಳಿದ ಬಳಿಕ ಚಾಕುವಿನಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗೆ ಹಲವು ಬಾರಿ ಶರಣಾಗುವಂತೆ ಎಚ್ಚರಿಕೆ ನೀಡಿದರೂ ಆತ ಹಲ್ಲೆ ಮುಂದುವರಿಸಿದ್ದರಿಂದ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿ ಮೃತಪಟ್ಟಿದ್ದಾನೆ ಎಂದು ಆನಂದ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಜಸಾನಿ ತಿಳಿಸಿದ್ದಾರೆ.

ಜುಲೈ 18ರಂದು ಸುರೇಶ್ ಪರ್ಮಾರ್ ಬಾಲಕಿಯನ್ನು ಕರೆದುಕೊಂಡು ಹೋಗುತ್ತಿರುವ ದೃಶ್ಯಗಳು ಆನಂದ್ ಜಿಲ್ಲೆಯ ವಸಾದ್ ರೈಲ್ವೆ ನಿಲ್ದಾಣದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿತ್ತು. ಮರುದಿನ (ಜುಲೈ 19) ಬೆಳಿಗ್ಗೆ ರೈಲ್ವೆ ಹಳಿಗಳ ಸಮೀಪ ಬಾಲಕಿಯ ಶವ ಪತ್ತೆಯಾಗಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವುದು ದೃಢಪಟ್ಟಿತ್ತು.