Home Advertisement
Home ಸುದ್ದಿ ದೇಶ ರಾಜ್ಯ ಸರ್ಕಾರ ಕನ್ನಡ ಶಾಲೆ ಮುಚ್ಚುತ್ತಿರುವುದು ಖಂಡನೀಯ

ರಾಜ್ಯ ಸರ್ಕಾರ ಕನ್ನಡ ಶಾಲೆ ಮುಚ್ಚುತ್ತಿರುವುದು ಖಂಡನೀಯ

0
52

ಕಾಂಗ್ರೆಸ್ ಹತಾಶೆಯಿಂದ ಸಂಸತ್ತಿನಲ್ಲಿ ಗದ್ದಲ: ಬಸವರಾಜ ಬೊಮ್ಮಾಯಿ

ನವದೆಹಲಿ: ಕರ್ನಾಟಕ ಸರ್ಕಾರ ಈಗಾಗಲೇ ರಾಜ್ಯದಾದ್ಯಂತ 638 ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಿರುವುದು ಕನ್ನಡ ಮತ್ತು ಕನ್ನಡ ಶಾಲೆಗಳ ವಿರೋಧಿ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಗಂಭೀರವಾಗಿ ಹದಗೆಟ್ಟಿದ್ದು, ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣದಿಂದ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂದು ಆರೋಪಿಸಿದರು. ಇದರಿಂದ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಶಿಕ್ಷಣಕ್ಕೆ ಧಕ್ಕೆ ಉಂಟಾಗಿದೆ ಎಂದರು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಮತ್ತೆ ಚಿರತೆ ಆತಂಕ: ಸಭಾಪತಿ ಹೊರಟ್ಟಿ ಅವರ ತೋಟದಲ್ಲಿ ಪ್ರತ್ಯಕ್ಷ

ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಸರ್ಕಾರ ಬದ್ಧವಾಗಿರಬೇಕು. ಆದರೆ ಪ್ರಸ್ತುತ ಸರ್ಕಾರದ ನಡೆ ಕನ್ನಡ ವಿರೋಧಿ ಧೋರಣೆಯಾಗಿದೆ. ಕೂಡಲೇ ಮುಚ್ಚಿರುವ ಎಲ್ಲಾ ಕನ್ನಡ ಶಾಲೆಗಳನ್ನು ಪುನಾರಾರಂಭಿಸಬೇಕು ಎಂದು ಅವರು ಒತ್ತಾಯಿಸಿದರು.

ಹತಾಶರಾಗಿ ಗದ್ದಲ: ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷ ನಿರಂತರ ಚುನಾವಣಾ ಸೋಲುಗಳಿಂದ ಹತಾಶಗೊಂಡಿದೆ ಎಂದು ಟೀಕಿಸಿದರು.

ಇದನ್ನೂ ಓದಿ: ಹಿರಿಯ ಪತ್ರಕರ್ತ, ಮಾಜಿ ವಿಧಾನ ಪರಿಷತ್ ಸದಸ್ಯ ಪಿ. ರಾಮಯ್ಯ ನಿಧನ

“ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ತಮ್ಮ ರಾಜಕೀಯ ಸೋಲುಗಳಿಂದ ಬೇಸತ್ತು ಸಂಸತ್ತಿನಲ್ಲಿ ಅಸಭ್ಯ ವರ್ತನೆ ತೋರುತ್ತಿದ್ದಾರೆ. ಬೆಂಚ್‌ಗಳ ಮೇಲೆ ನಿಂತು ಗದ್ದಲ ಮಾಡುವುದು, ಸ್ಪೀಕರ್‌ ವಿರುದ್ಧ ದಾಳಿ ನಡೆಸುವುದು, ಪ್ರಧಾನಮಂತ್ರಿಯ ಆಸನದವರೆಗೆ ಹೋಗಿ ತಡೆ ಮಾಡಲು ಪ್ರಯತ್ನಿಸುವುದು ಮಿತಿ ಮೀರಿದ ವರ್ತನೆ” ಎಂದು ಅವರು ಹೇಳಿದರು. ಇಂತಹ ಘಟನೆಗಳು ಸಂಸತ್ತಿನ ಇತಿಹಾಸದಲ್ಲೇ ಅಪರೂಪವಾಗಿವೆ ಎಂದು ಬೊಮ್ಮಾಯಿ ಅಭಿಪ್ರಾಯಪಟ್ಟರು.

ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಕಲಾಪವನ್ನು ಸುಗಮವಾಗಿ ನಡೆಸುವರೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಅವರು ಏನು ಮಾಡುತ್ತಾರೆ ಎಂಬುದು ತಿಳಿದಿಲ್ಲ. ಆದರೆ ಜನರ ಸಮಸ್ಯೆಗಳ ಬಗ್ಗೆ ಮಾತನಾಡುವ ಬದಲು ಸದಾ ಗದ್ದಲ ಸೃಷ್ಟಿಸುವುದನ್ನೇ ತಮ್ಮ ಅಜೆಂಡಾಗಿಸಿಕೊಂಡಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ಕಂಬಳದ ಇತಿಹಾಸಕ್ಕೆ ಜೀವ ತುಂಬಿದ ವೀರೇಂದ್ರ ಹೆಗ್ಗಡೆ: ವೀರ ಕಂಬಳ ಚಿತ್ರ ತೆರೆಗೆ ಸಿದ್ಧ

ರಾಜಕೀಯದಲ್ಲಿ ಆರೋಗ್ಯಕರ ಚರ್ಚೆ ನಡೆಯಬೇಕಿದ್ದು, ಗದ್ದಲ ಮತ್ತು ಅಶಾಂತಿಯಿಂದ ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಧಕ್ಕೆಯಾಗುತ್ತದೆ ಎಂದು ಅವರು ಎಚ್ಚರಿಸಿದರು.

Previous articleಭಾರತೀಯ ರೈಲ್ವೆಯ ಹೊಸ ಡಿಜಿಟಲ್ ಇನೋವೇಶನ್: RailOne ಆಪ್
Next articleಸಾಮಾನ್ಯ ಜನ ಸಂತೋಷವಾಗಿರುವುದೇ ನಿಜವಾದ ಅಭಿವೃದ್ಧಿ