ಬಿಜೆಪಿ ಅಧಿಕಾರದಲ್ಲಿ ಮುಂದುವರಿಯಲು ಕ್ಷೇತ್ರ ಪುನರ್ವಿಂಗಡಣೆ ಸಂಚು

ನವದೆಹಲಿ: ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಮೂಲಕ ದೇಶದ ರಾಜಕೀಯ ಭೂಪಟವನ್ನೇ ಬದಲಾಯಿಸಿ, ಅಧಿಕಾರದಲ್ಲಿ ಮುಂದುವರಿಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು 850ಕ್ಕೆ ಹೆಚ್ಚಿಸುವ ಉದ್ದೇಶ ಹೊಂದಿರುವ ಕ್ಷೇತ್ರ ಪುನರ್ವಿಂಗಡಣೆ ಮಸೂದೆಯನ್ನು ಟೀಕಿಸಿದರು. ಮಹಿಳಾ ಮೀಸಲಾತಿ ಜಾರಿಗೆ ಕ್ಷೇತ್ರಗಳ ಮರುಹಂಚಿಕೆಯನ್ನು ಜೋಡಿಸುವ ಅಗತ್ಯವಿಲ್ಲ. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಬಿಜೆಪಿ ಈ ಕ್ರಮಕ್ಕೆ ಮುಂದಾಗಿದೆ ಎಂದು ದೂರಿದರು. ಚುನಾವಣಾ … Continue reading ಬಿಜೆಪಿ ಅಧಿಕಾರದಲ್ಲಿ ಮುಂದುವರಿಯಲು ಕ್ಷೇತ್ರ ಪುನರ್ವಿಂಗಡಣೆ ಸಂಚು