ದೆಹಲಿ: ಕೆಂಪುಕೋಟೆ ಬಳಿ ನಿಲ್ಲಿಸಿದ್ದ ಕಾರೊಂದು ಸ್ಫೋಟಗೊಂಡಿದ್ದು ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ.
ಈ ಪ್ರಬಲ ಸ್ಫೋಟದ ಪರಿಣಾಮವಾಗಿ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾಗಿ, ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ದೆಹಲಿಯಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಏಳು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ.
ರೆಡ್ ಫೋರ್ಟ್ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ನಿಲ್ಲಿಸಿದ್ದ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆ ಸಾಕಷ್ಟು ಹೆಚ್ಚಾಗಿತ್ತು. ಭಾರೀ ಸ್ಫೋಟದಿಂದ ಸ್ಥಳದಲ್ಲಿದ್ದ ಹಲವಾರು ವಾಹನಗಳು ಹಾನಿಗೊಳಗಾಗಿದ್ದು ಈ ಪ್ರದೇಶದಲ್ಲಿ ಭೀತಿ ಆವರಿಸಿದೆ.

























