Home Advertisement
Home ಸುದ್ದಿ ದೇಶ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿಎಂ ನಿತೀಶ್‌ ಕುಮಾರ್‌ ರಾಜೀನಾಮೆ

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿಎಂ ನಿತೀಶ್‌ ಕುಮಾರ್‌ ರಾಜೀನಾಮೆ

0
245

ಪಟನಾ: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.

ಜೆಡಿಯು ಮುಖ್ಯಸ್ಥರಾದ ನಿತೀಶ್ ಕುಮಾ‌ರ್ ಮಾರ್ಚ್‌ 16ರಂದು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

1985ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ನಿತೀಶ್ ಕುಮಾರ್ ಮೊದಲ ಬಾರಿಗೆ ಬಿಹಾರ ವಿಧಾನಸಭೆ ಪ್ರವೇಶಿಸಿದ್ದರು. ಅಲ್ಲದೇ ಅಟಲ್‌ ಬಿಹಾರಿ ವಾಜಪೇಯಿ ಅವರ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.

ಎನ್‌ಡಿಎ ಬೆಂಬಲದೊಂದಿಗೆ 2005ರಲ್ಲಿ ಮೊದಲ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದಾದ ಬಳಿಕ 20 ವರ್ಷಗಳಲ್ಲಿ 10 ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.