ಸಂಸತ್ ಭವನದ ನಾರ್ತ್ ಬ್ಲಾಕ್‌ನಲ್ಲಿ ಬೆಂಕಿ ಅವಘಡ: ದಟ್ಟ ಹೊಗೆ

ನವದೆಹಲಿ: ಕೇಂದ್ರ ಸರ್ಕಾರದ ಪ್ರಮುಖ ಆಡಳಿತ ಕೇಂದ್ರವಾಗಿರುವ ನವದೆಹಲಿಯ ಸೆಂಟ್ರಲ್ ವಿಸ್ಟಾ ವ್ಯಾಪ್ತಿಯ ಐತಿಹಾಸಿಕ ನಾರ್ತ್ ಬ್ಲಾಕ್ ಕಟ್ಟಡದಲ್ಲಿ ಸೋಮವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಆವರಿಸಿದ್ದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಿಗ್ಗೆ 11.10ರ ಸುಮಾರಿಗೆ ನಾರ್ತ್ ಬ್ಲಾಕ್ ಕಟ್ಟಡದಿಂದ ಹೊಗೆ ಬರುತ್ತಿರುವ ಬಗ್ಗೆ ದೆಹಲಿ ಅಗ್ನಿಶಾಮಕ ಸೇವೆಗೆ ಕರೆ … Continue reading ಸಂಸತ್ ಭವನದ ನಾರ್ತ್ ಬ್ಲಾಕ್‌ನಲ್ಲಿ ಬೆಂಕಿ ಅವಘಡ: ದಟ್ಟ ಹೊಗೆ