ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿಂದು ವಿರೋಧ ಪಕ್ಷಗಳ ‘ಇಂಡಿ’ ಒಕ್ಕೂಟದ ಸಭೆಯ ಜರುಗಿತು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ವ್ಯವಸ್ಥೆಯ ದುರಾಡಳಿತ, ಬೆಲೆ ಏರಿಕೆ ಮತ್ತು SIR ಸೇರಿದಂತೆ ಕೇಂದ್ರ ಸರಕಾರದ ಲೋಪಗಳ ವಿರುದ್ಧ ವಾಗ್ದಾಳಿ ನಡೆಸಲಾಯಿತು.
ನವದೆಹಲಿಯ ಕಾನ್ಸಿಟ್ಯೂಷನ್ ಕ್ಲಬ್‌ನಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಇನ್ನು ಮುಂದೆ ಪ್ರತಿ 2 ತಿಂಗಳಿಗೊಮ್ಮೆ ‘ಇಂಡಿಯಾ’ ಮೈತ್ರಿಕೂಟದ ಸಭೆ ಸೇರಲಿದ್ದು, ಮುಂದಿನ ಸಭೆ ಹೈದರಾಬಾದ್‌ನಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಐದು ಪ್ರಮುಖ ವಿಷಯಗಳ ಕುರಿತು ಒಮ್ಮತದ ತೀರ್ಮಾನವನ್ನು ಮಾಡಲಾಗಿದ್ದು, ಎಸ್‌ಐಆರ್ ಸಮಸ್ಯೆಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆಯುವುದು. ನೀಟ್-ಯುಜಿ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ. ಆರ್ಥಿಕ ಪರಿಸ್ಥಿತಿಯ ಕುರಿತು ಸರ್ವಪಕ್ಷ ಸಭೆ ಕರೆಯುವುದು. ಪ್ರತಿ ಎರಡು ತಿಂಗಳಿಗೊಮ್ಮೆ ಸಭೆ ಮತ್ತು ಸಂಸತ್ತಿನಲ್ಲಿ ಸರ್ವಪಕ್ಷ ಸಮನ್ವಯ ಮುಂದುವರಿಯುವುದು ಎಂಬ ಐದು ನಿರ್ಣಯ ಕೈಗೊಳ್ಳಲಾಯಿತು ಎಂದರು.





















