ಇಂದಿರಾ ಗಾಂಧಿ ಶಾಂತಿ ಪ್ರಶಸ್ತಿಗೆ ಗ್ರಾಕಾ ಮ್ಯಾಚೆಲ್ ಆಯ್ಕೆ

0
5

ನವದೆಹಲಿ: ಮಹಿಳಾ ಮತ್ತು ಮಕ್ಕಳ ಹಕ್ಕುಗಳಿಗಾಗಿ ಹೋರಾಟ ಮಾಡಿದ ಗ್ರಾಕಾ ಮ್ಯಾಚೆಲ್ ಅವರನ್ನು 2025ನೇ ಸಾಲಿನ ಇಂದಿರಾ ಗಾಂಧಿ ಶಾಂತಿ ನಿಶ್ಶಸ್ತ್ರೀಕರಣ ಮತ್ತು ಅಭಿವೃದ್ಧಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಭಾರತದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೆನನ್ ನೇತೃತ್ವದ ತೀರ್ಪುಗಾರರ ಸಮಿತಿಯು ಮೊಜಾಂಬಿಕ್ ಹಕ್ಕುಗಳ ಕಾರ್ಯಕರ್ತೆ ಗ್ರಾಕಾ ಮ್ಯಾಚೆಲ್ ಅವರನ್ನು ಆಯ್ಕೆ ಮಾಡಿದೆ.

ಶಿಕ್ಷಕಿಯಾಗಿ, ಸ್ವಾತಂತ್ರ್ಯ ಹೋರಾಟಗಾರ್ತಿ, ಮಾನವೀಯ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ಮ್ಯಾಚೆಲ್, ಜೀವನದುದ್ದಕ್ಕೂ ಮಾನವ ಹಕ್ಕುಗಳ ರಕ್ಷಣೆಗಾಗಿ ತೊಡಗಿಸಿಕೊಂಡಿದ್ದವರು.

ಅಕ್ಟೋಬರ್ 17, 1945ರಲ್ಲಿ ಮೊಜಾಂಬಿಕ್‌ನ ಗ್ರಾಕಾ ಸಿಂಬಿನ್ ಎಂಬ ಪ್ರದೇಶದಲ್ಲಿ ಜನಿಸಿದ ಅವರು. 1975ರಲ್ಲಿ ಮೊಜಾಂಬಿಕ್‌ನ ಮೊದಲ ಶಿಕ್ಷಣ ಮತ್ತು ಸಂಸ್ಕೃತಿ ಸಚಿವರಾದರು.

2018ರಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಅತ್ಯುನ್ನತ ಗೌರವ WHO ಚಿನ್ನದ ಪದಕಕ್ಕೂ ಭಾಜನರಾಗಿರುವ ಗ್ರಾಕಾ ಮ್ಯಾಚೆಲ್ ಅವರನ್ನು 2025ರ ಸಾಲಿನ ಇಂದಿರಾ ಗಾಂಧಿ ಶಾಂತಿ ನಿಶ್ಶಸ್ತ್ರೀಕರಣ ಮತ್ತು ಅಭಿವೃದ್ಧಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

Previous articleಸಂಸದ ಬಿವೈ ರಾಘವೇಂದ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ