Home Advertisement
Home ಸುದ್ದಿ ದೇಶ ಮುಂಬೈ: ಬಂದರ ಬಳಿಯ ಸರಕು ಗೋದಾಮಿನಲ್ಲಿ ಭಾರಿ ಬೆಂಕಿ ಅವಘಡ

ಮುಂಬೈ: ಬಂದರ ಬಳಿಯ ಸರಕು ಗೋದಾಮಿನಲ್ಲಿ ಭಾರಿ ಬೆಂಕಿ ಅವಘಡ

0
80

ಮುಂಬೈ: ಜವಾಹರಲಾಲ್ ನೆಹರು ಬಂದರು ಪ್ರಾಧಿಕಾರ (ಜೆಎನ್‌ಪಿಎ) ವ್ಯಾಪ್ತಿಯ ಉರಾನ್ ಪ್ರದೇಶದ ಗವ್ಹಾನ್ ಫಾಟಾ ಬಳಿ ಇರುವ ಸರಕು ನಿರ್ವಹಣಾ ಗೋದಾಮಿನಲ್ಲಿ ಶನಿವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಿಂದ ಸ್ಥಳೀಯವಾಗಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಗ್ನಿಶಾಮಕ ದಳದ ತ್ವರಿತ ಕಾರ್ಯಾಚರಣೆಯಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಮಾಹಿತಿಯ ಪ್ರಕಾರ, ಗೋದಾಮಿನೊಳಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವು ನಿಮಿಷಗಳಲ್ಲಿ ಅದು ವ್ಯಾಪಕವಾಗಿ ಹಬ್ಬಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳಕ್ಕೆ ಮುಂಬೈ ಅಗ್ನಿಶಾಮಕ ದಳ (MFB) ಸಿಬ್ಬಂದಿ, ಪೊಲೀಸರು ಮತ್ತು ಸ್ಥಳೀಯ ಆಡಳಿತದ ತಂಡಗಳು ಧಾವಿಸಿ ಅಗ್ನಿ ನಂದಿಸುವ ಕಾರ್ಯಾಚರಣೆ ಕೈಗೊಂಡಿವೆ.

ಅಧಿಕಾರಿಗಳ ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಗೋದಾಮಿನಲ್ಲಿದ್ದ ಸರಕುಗಳಿಗೆ ಹಾನಿಯಾಗಿರುವ ಸಾಧ್ಯತೆ ಇದೆ. ಬೆಂಕಿ ಕಾಣಿಸಿಕೊಂಡ ಕಾರಣ ಇನ್ನೂ ಸ್ಪಷ್ಟವಾಗಿಲ್ಲದಿದ್ದರೂ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಪ್ರಸ್ತುತ ಉರಾನ್ ಘಟನೆಯಲ್ಲಿಯೂ ಅಗ್ನಿಶಾಮಕ ದಳವು ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಯಶಸ್ವಿಯಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಹೆಚ್ಚಿನ ಹಾನಿ ಮತ್ತು ಕಾರಣಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.