Home Advertisement
Home ಸುದ್ದಿ ದೇಶ ಕರ್ನಾಟಕದಲ್ಲಿ ಎಪ್ರಿಲ್‌ 9 ರಂದು ಚುನಾವಣೆ, ಮೇ 4ಕ್ಕೆ ಫಲಿತಾಂಶ

ಕರ್ನಾಟಕದಲ್ಲಿ ಎಪ್ರಿಲ್‌ 9 ರಂದು ಚುನಾವಣೆ, ಮೇ 4ಕ್ಕೆ ಫಲಿತಾಂಶ

0
104

ನವದೆಹಲಿ: ಕರ್ನಾಟಕ ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಎಪ್ರಿಲ್‌ 9ರಂದು ಉಪ ಚುನಾವಣೆ ನಡೆಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಘೋಷಿಸಿದರು.

ನವದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌, ಎಪ್ರಿಲ್‌ 9ರಂದು ಮತದಾನ ನಡೆಯಲಿದ್ದು, ಮೇ 4 ರಂದು ಚುನಾವಣಾ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಮತ್ತು ಎಚ್‌.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.