SK Home Ad
Home ಸುದ್ದಿ ದೇಶ ಗಾನ ಕೋಗಿಲೆ ಎಸ್. ಜಾನಕಿ ದೈವಾಧೀನ: ಸಂಗೀತ ಲೋಕದ ದಂತಕಥೆ ಇನ್ನಿಲ್ಲ

ಗಾನ ಕೋಗಿಲೆ ಎಸ್. ಜಾನಕಿ ದೈವಾಧೀನ: ಸಂಗೀತ ಲೋಕದ ದಂತಕಥೆ ಇನ್ನಿಲ್ಲ

0
84

ಮೈಸೂರು: ದಕ್ಷಿಣ ಭಾರತದ ಖ್ಯಾತ ಗಾಯಕಿ, ‘ಗಾನ ಕೋಗಿಲೆ’ ಎಂದೇ ಜನಪ್ರಿಯರಾಗಿದ್ದ ಎಸ್. ಜಾನಕಿ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ದಶಕಗಳ ಕಾಲ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲಿ ಸಾವಿರಾರು ಸುಮಧುರ ಗೀತೆಗಳನ್ನು ಹಾಡುವ ಮೂಲಕ ಸಂಗೀತ ಪ್ರೇಮಿಗಳ ಹೃದಯ ಗೆದ್ದಿದ್ದ ಜಾನಕಮ್ಮ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕೆ ಭರಿಸಲಾಗದ ನಷ್ಟವಾಗಿದೆ. ಅವರ ನಿಧನಕ್ಕೆ ನಾಡಿನ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.