ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಓಗೊಟ್ಟ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ವಿಧಾನ ಭವನಕ್ಕೆ ಬೈಕ್‌ನಲ್ಲಿ ಬಂದಿದ್ದಾರೆ.
ಗುರುವಾರ ವಿಧಾನ ಪರಿಷತ್‌ನ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲು ಅವರು, ಕಾರನ್ನು ಬಿಟ್ಟು ಬೈಕ್‌ನಲ್ಲಿ ಬರುವ ಮೂಲಕ ಗಮನ ಸೆಳೆದರು.
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಇಂಧನ ಅಭಾವ ಹೆಚ್ಚುತ್ತಿರುವ ಕುರಿತಂತೆ ಇಂಧನ ಬಳಕೆ ಕಡಿಮೆ ಮಾಡಲು ಪ್ರಧಾನಿ ಮೋದಿ ಮನವಿ ಮಾಡಿದ್ದರು.




















