SK Home Ad
Home ಸುದ್ದಿ ದೇಶ ಮಹಾತ್ಮ ಗಾಂಧಿ ಮರಿಮೊಮ್ಮಗ ತುಷಾರ್ ಪೊಲೀಸ್​ ವಶಕ್ಕೆ

ಮಹಾತ್ಮ ಗಾಂಧಿ ಮರಿಮೊಮ್ಮಗ ತುಷಾರ್ ಪೊಲೀಸ್​ ವಶಕ್ಕೆ

0
42

ಮುಂಬೈ: ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರತಿಭಟನೆಗೆ ಬೆಂಬಲ ಸೂಚಿಸಿ ಆಗಸ್ಟ್ ಕ್ರಾಂತಿ ಮೈದಾನಕ್ಕೆ ತೆರಳುತ್ತಿದ್ದ ಮಹಾತ್ಮ ಗಾಂಧಿಯವರ ಮರಿಮೊಮ್ಮಗ, ‘ಹಮ್ ಭಾರತ್ ಕೆ ಲೋಗ್’ ಸಂಘಟನೆಯ ಅಧ್ಯಕ್ಷ ತುಷಾರ್ ಗಾಂಧಿ ಅವರನ್ನು ಮುಂಬೈ ಪೊಲೀಸರು ಶನಿವಾರ ವಶಕ್ಕೆ ಪಡೆದರು.

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆಗೆ ಬೆಂಬಲವಾಗಿ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ‘ಚಲೇ ಜಾವೋ!’ ಘೋಷಣೆಯೊಂದಿಗೆ ಪ್ರತಿಭಟನೆ ನಡೆಸಲು ಅವರು ಉದ್ದೇಶಿಸಿದ್ದರು. ಈ ವೇಳೆ ಅವರನ್ನು ವಶಕ್ಕೆ ಪಡೆದು ಡಿ.ಎನ್. ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು. ಅಂಧೇರಿಯಲ್ಲಿ ಸಿಜೆಪಿ ಉಪಾಧ್ಯಕ್ಷೆ ಗುಡ್ಡಿ ಎಸ್.ಎಲ್. ಅವರನ್ನೂ ಪೊಲೀಸರು ಬಂಧಿಸಿದ್ದಾರೆ.

ಪ್ರತಿಭಟನೆ ಮುಂದುವರಿಯಲಿದೆ ಎಂದು ಎಕ್ಸ್‌ನಲ್ಲಿ ತಿಳಿಸಿರುವ ತುಷಾರ್ ಗಾಂಧಿ, ‘ಲೋಕಶಾಹಿ ಜಿಂದಾಬಾದ್’ ಎಂದು ಘೋಷಿಸಿದ್ದಾರೆ. ಪ್ರತಿಭಟನೆಗೆ ಅನುಮತಿ ಕೋರಿರಲಿಲ್ಲ ಎಂದು ಪೊಲೀಸರು ಹೇಳಿದ್ದರೆ, ಇಮೇಲ್ ಮೂಲಕ ಅನುಮತಿ ಕೇಳಿದ್ದರೂ ಪ್ರತಿಕ್ರಿಯೆ ಬಂದಿರಲಿಲ್ಲ ಎಂದು ಸಿಜೆಪಿ ಕಾರ್ಯಕರ್ತರು ತಿಳಿಸಿದ್ದಾರೆ.