ಮುಸ್ಲಿಮರು ಸೂರ್ಯ ನಮಸ್ಕಾರ ಮಾಡಿ, ನದಿಗಳನ್ನು ಪೂಜಿಸಿ

0
5

ನವದೆಹಲಿ: ಹಿಂದೂ ಧರ್ಮ ಶ್ರೇಷ್ಠವಾದದ್ದು. ನಮ್ಮ ಮುಸ್ಲಿಂ ಸಹೋದರರು ಸೂರ್ಯ ನಮಸ್ಕಾರ ಮಾಡಬೇಕು, ನದಿಗಳನ್ನು ಪೂಜಿಸಬೇಕು ಎಂದು ಹಿರಿಯ ಆರ್‌ಎಸ್‌ಎಸ್‌ ನಾಯಕ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

ಉತ್ತರಪ್ರದೇಶದ ಸಂತ ಕಬೀರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ನೆಲದಲ್ಲಿರುವ ಮುಸ್ಲಿಮರು ಸೂರ್ಯ ನಮಸ್ಕಾರ ಮಾಡಬೇಕು, ನದಿಗಳನ್ನು ಪೂಜಿಸಬೇಕು ಇದರಿಂದಾಗಿ ಮುಸ್ಲಿಮರಿಗೆ ಏನೂ ತೊಂದರೆಯಾಗುವುದಿಲ್ಲ. ನಮ್ಮ ಹಿಂದೂ ಧರ್ಮ ಸರ್ವೋಚ್ಛ. ಅದು ಎಲ್ಲರ ಪರವಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ದೇವಿ ಸನ್ನಿಧಿಯಲ್ಲಿ ಹೈಕಮಾಂಡ್ ಒಪ್ಪಂದದ ಗುಟ್ಟು ಬಿಚ್ಚಿಟ್ಟ ಡಿಸಿಎಂ

ಸೂರ್ಯ ನಮಸ್ಕಾರವು ವೈಜ್ಞಾನಿಕ ಮತ್ತು ಆರೋಗ್ಯಕರ ಅಭ್ಯಾಸ. ಪ್ರಾರ್ಥನೆ ಮಾಡುವವರು ಪ್ರಾಣಾಯಾಮ ಮಾಡುವುದರಲ್ಲಿ ತಪ್ಪೇನು? ಇದರಿಂದ ಮುಸ್ಲಿಮರಿಗೆ ಏನು ಹಾನಿ? ಸೂರ್ಯ ನಮಸ್ಕಾರ ಮಾಡುವವರನ್ನು ನಮಾಜ್‌ ಮಾಡುವುದನ್ನು ಬಿಡಿ ಎಂದು ನಾವು ಹೇಳುವುದಿಲ್ಲ ಎಂದರು.

ಮಾನವ ಧರ್ಮಕ್ಕೆ ಆದ್ಯತೆ ನೀಡುವ ಮೂಲಕ ಯಾವುದೇ ನಂಬಿಕೆ ಅನುಸರಿಸಲು ಜನರು ಸ್ವತಂತ್ರರು. ಹಿಂದೂ ತತ್ವಶಾಸ್ತ್ರವು ಎಲ್ಲಾ ಜೀವಿಗಳು ಮತ್ತು ಪ್ರಕೃತಿ ವಿಚಾರವಾಗಿ ಅಹಿಂಸೆಯನ್ನು ಬೋಧಿಸುತ್ತದೆ ಎಂದಿದ್ದಾರೆ.

Previous articleಜಿಪಿಎಸ್ ಟ್ರ್ಯಾಕರ್ ಹೊಂದಿದ್ದ ಹ್ಯೂಗ್ಲಿನ್ ಸೀಗಲ್ ಹಕ್ಕಿ ಸಾವು
Next article20 ಕೋಟಿ ರೂ. ಮೌಲ್ಯದ ಸ್ವತ್ತು ವಾರಸುದಾರರಿಗೆ ಹಸ್ತಾಂತರ