SK Home Ad
Home ಸುದ್ದಿ ದೇಶ ಜುಲೈ 20ರೊಳಗೆ NEET UG ಮರುಪರೀಕ್ಷೆ ಫಲಿತಾಂಶ: NTA ಸ್ಪಷ್ಟನೆ

ಜುಲೈ 20ರೊಳಗೆ NEET UG ಮರುಪರೀಕ್ಷೆ ಫಲಿತಾಂಶ: NTA ಸ್ಪಷ್ಟನೆ

0
74

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) 2026ನೇ ಸಾಲಿನ ನೀಟ್ ಯುಜಿ (NEET UG) ಮರುಪರೀಕ್ಷೆಯ ಫಲಿತಾಂಶವನ್ನು ಜುಲೈ 20ರೊಳಗೆ ಪ್ರಕಟಿಸಲಾಗುವುದು ಎಂದು ಸ್ಪಷ್ಟಪಡಿಸಿದೆ. ನಿಖರವಾದ ದಿನಾಂಕವನ್ನು ಇನ್ನೂ ಘೋಷಿಸದಿದ್ದರೂ, ಫಲಿತಾಂಶವನ್ನು ಸಾಧ್ಯವಾದಷ್ಟು ಬೇಗ ಪ್ರಕಟಿಸಲು ಯುದ್ಧೋಪಾದಿಯಲ್ಲಿ ಕಾರ್ಯ ನಡೆಯುತ್ತಿದೆ ಎಂದು ಎನ್‌ಟಿಎ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇ 3ರಂದು ದೇಶಾದ್ಯಂತ 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಯುಜಿ ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಿ, ಜೂನ್ 21ರಂದು ಮರುಪರೀಕ್ಷೆ ನಡೆಸಲಾಗಿತ್ತು.

ಇದನ್ನೂ ಓದಿ: ಬೆಂಗಳೂರು: ಕಲ್ಲು ಕ್ವಾರಿ ದುರಂತ – ಬಂಡೆ ಕುಸಿದು 7 ಕಾರ್ಮಿಕರ ಸಾವು

ಎನ್‌ಟಿಎ ಅಧಿಕಾರಿಗಳ ಪ್ರಕಾರ, ಸಾಮಾನ್ಯವಾಗಿ ಪರೀಕ್ಷೆಯ ನಂತರ 45 ದಿನಗಳೊಳಗೆ ಫಲಿತಾಂಶ ಪ್ರಕಟಿಸಲಾಗುತ್ತದೆ. ಆದರೆ ಈ ಬಾರಿ ಮರುಪರೀಕ್ಷೆಯನ್ನು 37 ದಿನಗಳಲ್ಲೇ ಯಶಸ್ವಿಯಾಗಿ ನಡೆಸಿರುವುದರಿಂದ, ಫಲಿತಾಂಶವನ್ನು ನಿಗದಿತ ಅವಧಿಗಿಂತ ಮೊದಲೇ ಪ್ರಕಟಿಸುವ ಉದ್ದೇಶ ಹೊಂದಲಾಗಿದೆ.

ಜೂನ್ 25ರಂದು ತಾತ್ಕಾಲಿಕ ಉತ್ತರ ಕೀ (Provisional Answer Key) ಬಿಡುಗಡೆ ಮಾಡಲಾಗಿದ್ದು, ಜೂನ್ 28ರವರೆಗೆ ಅಭ್ಯರ್ಥಿಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಈ ಅವಧಿಯಲ್ಲಿ ಸುಮಾರು 10 ಸಾವಿರ ಆಕ್ಷೇಪಣೆಗಳು ಸಲ್ಲಿಕೆಯಾಗಿದ್ದು, ಪ್ರತಿಯೊಂದನ್ನೂ ವಿಷಯ ಪರಿಣಿತರ ಮೂಲಕ ಪರಿಶೀಲಿಸಲಾಗುತ್ತಿದೆ. ಪರಿಶೀಲನೆ ಪೂರ್ಣಗೊಂಡ ಬಳಿಕ ಅಂತಿಮ ಉತ್ತರ ಕೀ ಹಾಗೂ ಫಲಿತಾಂಶ ಪ್ರಕಟಿಸಲಾಗುತ್ತದೆ.

ಇದನ್ನೂ ಓದಿ: ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪ: ಉಪನ್ಯಾಸಕನ ವಿರುದ್ಧ FIR

ಮರುಪರೀಕ್ಷೆಯಿಂದ ಎಂಬಿಬಿಎಸ್ ಶೈಕ್ಷಣಿಕ ವರ್ಷದ ಆರಂಭಕ್ಕೆ ಯಾವುದೇ ವಿಳಂಬವಾಗುವುದಿಲ್ಲ ಎಂದು ಎನ್‌ಟಿಎ ಸ್ಪಷ್ಟಪಡಿಸಿದೆ. ಫಲಿತಾಂಶ ಪ್ರಕಟವಾದ ಬಳಿಕ ವೈದ್ಯಕೀಯ ಸಮಾಲೋಚನಾ ಸಮಿತಿ (MCC) ಅಖಿಲ ಭಾರತ ಕೋಟಾದ (AIQ) ಶೇ.15ರಷ್ಟು ಸೀಟುಗಳು, ಏಮ್ಸ್ (AIIMS), ಜಿಪ್ಮರ್ (JIPMER), ಕೇಂದ್ರ ವಿಶ್ವವಿದ್ಯಾಲಯಗಳು ಹಾಗೂ ಡೀಮ್ಡ್ ವಿಶ್ವವಿದ್ಯಾಲಯಗಳ ಪ್ರವೇಶಕ್ಕಾಗಿ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.

ಇನ್ನೊಂದೆಡೆ, ಶೇ.85ರಷ್ಟು ರಾಜ್ಯ ಕೋಟಾ ಸೀಟುಗಳಿಗೆ ಸಂಬಂಧಿಸಿದ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಆಯಾ ರಾಜ್ಯ ಸರ್ಕಾರಗಳು ಪ್ರತ್ಯೇಕವಾಗಿ ಪ್ರಕಟಿಸಲಿವೆ. ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳು ಆನ್‌ಲೈನ್ ನೋಂದಣಿ, ಕಾಲೇಜು ಹಾಗೂ ಕೋರ್ಸ್ ಆಯ್ಕೆ, ದಾಖಲೆ ಪರಿಶೀಲನೆ ಮತ್ತು ಪ್ರವೇಶ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗುತ್ತದೆ.

ಇದನ್ನೂ ಓದಿ: 30 ವರ್ಷಗಳ ಬಳಿಕ ‘ಅಮೇರಿಕಾ ಅಮೇರಿಕಾ’ ಹೆಸರಿನಲ್ಲಿ ಹೊಸ ಸಿನಿಮಾ

ಈ ನಡುವೆ ತಮಿಳುನಾಡು ಸೇರಿದಂತೆ ಕೆಲವು ರಾಜ್ಯಗಳು, ನೀಟ್ ಫಲಿತಾಂಶದ ನಿರೀಕ್ಷೆಯಲ್ಲಿದ್ದರೂ ವೈದ್ಯಕೀಯ ಪ್ರವೇಶಕ್ಕೆ ಸಂಬಂಧಿಸಿದ ಪೂರ್ವಸಿದ್ಧತಾ ಪ್ರಕ್ರಿಯೆಗಳನ್ನು ಈಗಾಗಲೇ ಆರಂಭಿಸಿವೆ.