Home Advertisement
Home ಸುದ್ದಿ ದೇಶ ರಾಜ್ಯಸಭೆಗೆ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

ರಾಜ್ಯಸಭೆಗೆ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

0
85

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಬಿಹಾರ ರಾಜಕೀಯದಲ್ಲಿ ಹೊಸ ತಿರುವು ಮೂಡಿಸಿದೆ. ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಅವರು ತಮ್ಮ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣವಚನ ಬೋಧಿಸಿದರು. ನಿತೀಶ್ ಕುಮಾರ್ ಅವರು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ: ಈ ಸಮಾರಂಭದಲ್ಲಿ ಜೆ.ಪಿ. ನಡ್ಡಾ, ನಿರ್ಮಲಾ ಸೀತಾರಾಮನ್, ಅರ್ಜುನ್ ರಾಮ್ ಮೇಘವಾಲ್ ಸಹಿತ ಹಲವು ರಾಜಕೀಯ ನಾಯಕರು ಉಪಸ್ಥಿತರಿದ್ದರು. ಜೊತೆಗೆ ಜೆಡಿಯು ನಾಯಕ ಸಂಜಯ್ ಕುಮಾರ್ ಝಾ, ಕಾಂಗ್ರೆಸ್‌ನ ಜೈರಾಮ್ ರಮೇಶ್ ಮತ್ತು ಬಿಜೆಪಿ ನಾಯಕ ರಾಜೀವ್ ಪ್ರತಾಪ್ ರೂಡಿ ಕೂಡ ಭಾಗವಹಿಸಿದರು.

ಬಿಹಾರ ರಾಜಕೀಯದಲ್ಲಿ ಬದಲಾವಣೆಯ ಸುಳಿವು: ನಿತೀಶ್ ಕುಮಾರ್ ರಾಜ್ಯಸಭೆಗೆ ತೆರಳುತ್ತಿದ್ದಂತೆ ಬಿಹಾರದಲ್ಲಿ ಹೊಸ ಮುಖ್ಯಮಂತ್ರಿಯ ಆಯ್ಕೆ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದ್ದು ಏಪ್ರಿಲ್ 14ರೊಳಗೆ NDA ಹೊಸ ಸಿಎಂ ಘೋಷಣೆ ಮಾಡುಲಾಗುವುದು ಎಂದು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ.

ಬಿಜೆಪಿ‌ಗೆ ಅವಕಾಶ? : ಈ ಬೆಳವಣಿಗೆಯಿಂದ ಬಿಹಾರದಲ್ಲಿ ಬಿಜೆಪಿ ಮೊದಲ ಬಾರಿಗೆ ಮುಖ್ಯಮಂತ್ರಿಯ ಸ್ಥಾನ ಪಡೆಯುವ ಸಾಧ್ಯತೆ ಇದೆ. ಜೆಡಿಯು-ಬಿಜೆಪಿ ಸಂಬಂಧದಲ್ಲಿ ಹೊಸ ಅಧ್ಯಾಯ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ಯಾವಾಗ? : ನಿತೀಶ್ ಕುಮಾರ್ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಅವರು ಯಾವಾಗ ಮುಖ್ಯಮಂತ್ರಿ ಸ್ಥಾನ ತ್ಯಜಿಸುತ್ತಾರೆ ಎಂಬುದು ಸ್ಪಷ್ಟವಾಗಿಲ್ಲ. ಜೆಡಿಯು ನಾಯಕ ಶ್ರವಣ್ ಕುಮಾರ್ ಪ್ರಕಾರ ಸಾಂವಿಧಾನಿಕ ನಿಯಮಗಳ ಪ್ರಕಾರ 6 ತಿಂಗಳುಗಳವರೆಗೆ ಮುಖ್ಯಮಂತ್ರಿಯಾಗಿ ಮುಂದುವರಿಯುವ ಅವಕಾಶ ಇದೆ.

ದೀರ್ಘ ರಾಜಕೀಯ ಪಯಣ: ನಿತೀಶ್ ಕುಮಾರ್ ಅವರ ರಾಜಕೀಯ ಪಯಣದಲ್ಲಿ ಮೊದಲ ಬಾರಿ ಮಾರ್ಚ್ 2000ರಲ್ಲಿ ಮುಖ್ಯಮಂತ್ರಿ, ನವೆಂಬರ್ 2005ರಿಂದ ದೀರ್ಘ ಅವಧಿಗೆ ಅಧಿಕಾರ, ಮಧ್ಯೆ ಕೆಲವು ರಾಜಕೀಯ ಬದಲಾವಣೆಗಳ ನಡುವೆಯೂ ಪ್ರಭಾವ ಉಳಿಸಿಕೊಂಡಿದ್ದಾರೆ

NDA ಗೆ ಮತ್ತೊಮ್ಮೆ ಬಲ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು NDA ಒಕ್ಕೂಟ ಭರ್ಜರಿ ಜಯ ಸಾಧಿಸಿತ್ತು. ಈ ಹಿನ್ನೆಲೆ, ಈಗಿನ ಬೆಳವಣಿಗೆ ಬಿಹಾರ ರಾಜಕೀಯದಲ್ಲಿ ಹೊಸ ಸಮೀಕರಣಗಳನ್ನು ರೂಪಿಸುವ ಸೂಚನೆ ನೀಡುತ್ತಿದೆ.