Home Advertisement
Home ಸುದ್ದಿ ದೇಶ ಭಾರತದಲ್ಲಿ ಇಂಧನ ಕೊರತೆ ಇಲ್ಲ: ಪ್ರಧಾನಿ ಮೋದಿ ಭರವಸೆ

ಭಾರತದಲ್ಲಿ ಇಂಧನ ಕೊರತೆ ಇಲ್ಲ: ಪ್ರಧಾನಿ ಮೋದಿ ಭರವಸೆ

0
975

ನವದೆಹಲಿ: ಮಧ್ಯಪ್ರಾಚ್ಯ ದೇಶಗಳ ಸಂಘರ್ಷ ಜಾಗತಿಕ ಇಂಧನ ಪೂರೈಕೆಗೆ ದೊಡ್ಡ ಹೊಡೆತ ನೀಡಿದ್ದು, ಅದರ ಪರಿಣಾಮ ಭಾರತಕ್ಕೂ ತಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾದಲ್ಲಿನ ಯುದ್ಧ ನಮ್ಮೆಲ್ಲರ ಮೇಲೂ ಪರಿಣಾಮ ಬೀರಿದೆ. ಮೂರು ವಾರಗಳಿಂದ ನಡೆಯುತ್ತಿರುವ ಈ ಸಂಘರ್ಷ ವಿಶ್ವದಲ್ಲಿ ಗಂಭೀರ ಇಂಧನ ಸಮಸ್ಯೆ ಉಂಟುಮಾಡಿದೆ. ಕೇಂದ್ರ ಸರ್ಕಾರ ಎಲ್ಲ ಮೂಲಗಳಿಂದ ಇಂಧನ ಖರೀದಿಸಲು ಯತ್ನಿಸುತ್ತಿದೆ ಎಂದು ಮೋದಿ ಹೇಳಿದ್ದಾರೆ.

ಇಂಧನ ಭದ್ರತೆಯ ಕಾರ್ಯತಂತ್ರದ ಯೋಜನೆಯ ಭಾಗವಾಗಿ ಕಳೆದ 11 ವರ್ಷಗಳಲ್ಲಿ ಭಾರತ 53 ಲಕ್ಷ ಮೆಟ್ರಿಕ್ ಟನ್ ತೈಲ ನಿಕ್ಷೇಪವನ್ನು ಸೃಷ್ಟಿಸಿದೆ. ಇದನ್ನು 65 ಲಕ್ಷ ಮೆಟ್ರಿಕ್ ಟನ್‌ಗೆ ಹೆಚ್ಚಿಸಲು ಕಾರ್ಯ ನಡೆದಿದೆ ಎಂದು ತಿಳಿಸಿದರು.

ಭಾರತದ ಸಂಸ್ಕರಣಾ ಸಾಮರ್ಥ್ಯವನ್ನೂ ಹೆಚ್ಚಿಸಲಾಗಿದ್ದು, ಭಾರತದಲ್ಲಿ ಸಾಕಷ್ಟು ಕಚ್ಚಾ ತೈಲ ಸಂಗ್ರಹ ಮತ್ತು ನಿರಂತರ ಪೂರೈಕೆ ವ್ಯವಸ್ಥೆಗಳು ಇವೆ ಎಂದು ಭರವಸೆ ನೀಡಿದರು. ಅಲ್ಲದೇ ಹಡಗುಗಳನ್ನು ತಯಾರಿಸಲು 70,000 ಕೋಟಿ ರೂ.ಗಳ ಯೋಜನೆ ಆರಂಭಗೊಂಡಿದೆ.

ಪ್ರಸ್ತುತ ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ ಭಾರತ ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕ ಶಾಂತಿಯನ್ನು ಸೃಷ್ಟಿಸಲು ಬಯಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು.