SK Home Ad
Home ಸುದ್ದಿ ದೇಶ ತೈಲ, ಇಂಧನ ಬಿಕ್ಕಟ್ಟು: ಪ್ರಧಾನಿ ಮೋದಿ ಮಹತ್ವದ ಸಭೆ

ತೈಲ, ಇಂಧನ ಬಿಕ್ಕಟ್ಟು: ಪ್ರಧಾನಿ ಮೋದಿ ಮಹತ್ವದ ಸಭೆ

0
583

ನವದೆಹಲಿ: ಮಧ್ಯಪ್ರಾಚ್ಯ ದೇಶಗಳ ಯುದ್ಧ ಮುಂದುವರಿದಿದ್ದು, ದೇಶದಲ್ಲಿನ ತೈಲ, ಇಂಧನ ಹಾಗೂ ಗೊಬ್ಬರದ ಸಂಗ್ರಹದ ಕುರಿತಂತೆ ಮಾಹಿತಿ ಪಡೆಯಲು ಪ್ರಧಾನಿ ನರೇಂದ್ರ ಮೋದಿ ರವಿವಾರ ಸಂಜೆ ಹಿರಿಯ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೇಶಾದ್ಯಂತ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ತೈಲ, ಇಂಧನದ ಕೊರತೆಯಾಗದಂತೆ ಕ್ರಮವಹಿಸಲು, ಸಾಗಣೆ ಮತ್ತು ಪರಿಣಾಮಕಾರಿ ವಿತರಣೆಯನ್ನು ಖಚಿತಪಡಿಸಿಕೊಳ್ಳುವುದು ಈ ಸಭೆಯ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಇರಾನ್‌, ಇಸ್ರೇಲ್‌ ಮತ್ತು ಅಮೆರಿಕ ನಡುವಿನ ಯುದ್ಧದಿಂದಾಗಿ ಜಗತ್ತಿನಾದ್ಯಂತ ಇಂಧನ ಕೊರತೆ ಉಂಟಾಗಿದೆ. ಸರ್ಕಾರವು ಜಾಗತಿಕ ಬೆಳವಣಿಗೆಗಳನ್ನು ಪರಿಶೀಲಿಸುತ್ತಿದೆ. ಈ ನಿಟ್ಟಿನಲ್ಲಿ ದೇಶದಲ್ಲಿ ಕೊರತೆಯಾಗದಂತೆ ಕ್ರಮವಹಿಸಲಾಗುತ್ತಿದೆ.